ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ| ಶೆಹಬಾಜ್‌ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಣೆ

Last Updated 4 ಜೂನ್ 2022, 13:36 IST
ಅಕ್ಷರ ಗಾತ್ರ

ಲಾಹೋರ್‌: ಬಹುಕೋಟಿ ಹಣ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌, ಅವರ ಪುತ್ರ ಹಾಗೂ ಪಂಜಾಬ್‌ ಮುಖ್ಯಮಂತ್ರಿ ಹಮ್ಜಾ ಶೆಹಬಾಜ್‌ ಅವರನ್ನು ಬಂಧಿಸಲು ಅವಕಾಶ ನೀಡಬೇಕೆಂದು ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಯು (ಎಫ್‌ಐಎ) ಶನಿವಾರ ನ್ಯಾಯಾಲಯವನ್ನು ಕೋರಿದೆ. ಆದರೆ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನನ್ನು ಜೂನ್‌ 11ರ ವರೆಗೆ ವಿಸ್ತರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಶೆಹಬಾಜ್‌ ಷರೀಫ್‌ ಹಾಗೂ ಇತರ ಆರೋಪಿಗಳ ವಿರುದ್ಧ ಎಫ್‌ಐಎ, ಮಧ್ಯಂತರ ತನಿಖಾ ವರದಿಯನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಬಿಗಿ ಭದ್ರತೆಯಲ್ಲಿ ಶೆಹಬಾಜ್‌ ಷರೀಫ್‌ ಹಾಗೂ ಹಮ್ಜಾ ಶೆಹಬಾಜ್‌ ಅವರು ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT