ಇಸ್ಲಾಮಾಬಾದ್: ತೋಷಖಾನ ಭ್ರಷ್ಟಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿ ಸೆಷನ್ಸ್ ನ್ಯಾಯಾಲಯವೊಂದು ಹೊರಡಿಸಿರುವ ಆದೇಶದ ವಿರುದ್ಧ ಪಾಕಿಸ್ತಾನ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಆಗಸ್ಟ್ 22ರಂದು ನಡೆಸಲಿದೆ.
ಸೆಷನ್ಸ್ ನ್ಯಾಯಾಲಯವು ಉದ್ದೇಶಪೂರ್ವಕವಾಗಿ ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿದೆ. ಪಾಕಿಸ್ತಾನ ಚುನಾವಣಾ ಆಯೋಗದ ಪರ ವಕೀಲರ ಅಂತಿಮ ವಾದಕ್ಕೆ ಪ್ರತಿವಾದ ಹೂಡಲು ಇಮ್ರಾನ್ ಪರ ವಕೀಲರಿಗೆ ನ್ಯಾಯಾಲಯ ಅವಕಾಶ ನೀಡಲಿಲ್ಲ ಎಂದು ಮೇಲ್ಮನವಿಯಲ್ಲಿ ಹೇಳಲಾಗಿದೆ.
ಇಮ್ರಾನ್ ಖಾನ್ ಅವರಿಗೆ ಸೆಷನ್ಸ್ ನ್ಯಾಯಾಲಯವು ಆಗಸ್ಟ್ 5ರಂದು ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ₹1 ಲಕ್ಷ (ಪಾಕಿಸ್ತಾನಿ ಕರೆನ್ಸಿ) ದಂಡ ವಿಧಿಸಿದೆ. ಈ ಬೆನ್ನಲ್ಲೇ ಚುನಾವಣಾ ಆಯೋಗವು ಅವರನ್ನು ಐದು ವರ್ಷದ ಅವಧಿಗೆ ಅನರ್ಹಗೊಳಿಸಿ ಆದೇಶ ಹೊರಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.