ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ | ಅಧ್ಯಕ್ಷೀಯ ಚುನಾವಣೆ ಮಾರ್ಚ್‌ 9ಕ್ಕೆ

Published 25 ಫೆಬ್ರುವರಿ 2024, 13:41 IST
Last Updated 25 ಫೆಬ್ರುವರಿ 2024, 13:41 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದ ಅಧ್ಯಕ್ಷ ಸ್ಥಾನಕ್ಕೆ ಮಾರ್ಚ್‌ 9ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆಗಳನ್ನು ನಡೆಸಿದೆ.

ಅರ್ಧಕ್ಕೂ ಹೆಚ್ಚು ಸೆನೆಟರ್‌ಗಳು ಆರು ವರ್ಷಗಳ ಅಧಿಕಾರವಧಿ ಪೂರ್ಣಗೊಳಿಸಿ ನಿವೃತ್ತರಾಗುವ ಎರಡು ದಿನಗಳ ಮುಂಚಿತವಾಗಿ ಅಧ್ಯಕ್ಷೀಯ ಚುನಾವಣೆ ನಡೆಸುವ ನಿರ್ಧಾರವನ್ನು ಪಾಕಿಸ್ತಾನ ಚುನಾವಣಾ ಆಯೋಗ ಮಾಡಿದೆ ಎಂದು ’ಡಾನ್‌‘ ಪತ್ರಿಕೆ ವರದಿ ಮಾಡಿದೆ.

ಪಾಕಿಸ್ತಾನ ಮುಸ್ಲಿಂ ಲೀಗ್‌–ನವಾಜ್ (ಪಿಎಂಎಲ್‌–ಎನ್‌) ನೇತೃತ್ವದಲ್ಲಿ ಸರ್ಕಾರ ರಚಿಸಲಿರುವ ಆರು ಪಕ್ಷಗಳ ಮೈತ್ರಿಕೂಟವು ಆಸಿಫ್‌ ಅಲಿ ಜರ್ದಾರಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.  

ಜರ್ದಾರಿ ಅವರು ಈ ಹಿಂದೆ, 2008ರಿಂದ 2013ರವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 

‘ನಾಲ್ಕು ಪ್ರಾಂತ್ಯಗಳ 100 ಸೆನೆಟರ್‌ಗಳು ಸೇರಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ’ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ತಿಳಿಸಿದೆ.

ಹಾಲಿ ಅಧ್ಯಕ್ಷರಾಗಿರುವ ಡಾ. ಆರಿಫ್ ಅಲ್ವಿ ಅವರ ಅಧಿಕಾರವಧಿಯು ಕಳೆದ ವರ್ಷ ಸೆಪ್ಟೆಂಬರ್‌ನಲ್ಲೇ ಮುಕ್ತಾಯವಾಗಿದ್ದು, ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಅವರೇ ಮುಂದುವರಿಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT