ವಾಷಿಂಗ್ಟನ್: ನಿರ್ಗಮಿತ ಅಮೆರಿಕದ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರು ತಮ್ಮ ಉತ್ತರಾಧಿಕಾರಿ, ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ಶುಭಾಶಯ ಕೋರಿದ್ದು, ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಪೂರ್ಣ ಪ್ರಮಾಣದ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮೈಕ್ ಪೆನ್ಸ್ ಅವರು ಉಪಾಧ್ಯಕ್ಷರಾಗಿ ಚುನಾಯಿತರಾದ ಕಮಲಾ ಹ್ಯಾರಿಸ್ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿ, ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಪೂರ್ಣ ಸಹಾಯ ನೀಡುವುದಾಗಿ ಹೇಳಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಅಧ್ಯಕ್ಷೀಯ ಚುನಾವಣೆ ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಪೆನ್ಸ್ ಮತ್ತು ಕಮಲಾ ಅವರು ಪರಸ್ಪರ ಮಾತನಾಡಿದ್ದಾರೆ. ನವೆಂಬರ್ 3ರ ಚುನಾವಣೆ ನಂತರ ಮೊದಲ ಬಾರಿಗೆ ದೂರವಾಣಿ ಮೂಲಕ ಪರಸ್ಪರ ಮಾತನಾಡಿದ್ದಾರೆ.

ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಇಲ್ಲಿವರೆಗೂ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಚುನಾಯಿತ ಅಧ್ಯಕ್ಷ ಜೋ ಬೈಡನ್ ಅವರ ನಡುವೆ ಯಾವುದೇ ಮಾತುಕತೆ, ಸಂವಾದ ಮತ್ತು ಭೇಟಿ ನಡೆದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.