ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ | ಅಗ್ನಿ ಅವಘಡದಲ್ಲಿ 39 ಜನರ ಸಾವು

Published 24 ಜನವರಿ 2024, 14:23 IST
Last Updated 24 ಜನವರಿ 2024, 14:23 IST
ಅಕ್ಷರ ಗಾತ್ರ

ಬೀಜಿಂಗ್‌/ನಾನ್ಚಾಂಗ್‌: ಚೀನಾದ ಜಿಯಾಂಗ್ಸಿ ಪ್ರಾಂತ್ಯದ ಕಟ್ಟಡವೊಂದರಲ್ಲಿ ಬಯಧವಾರ ಅಗ್ನಿ ಅವಘಡ ಸಂಭವಿಸಿದ್ದು, 39 ಜನರು ಮೃತಪಟ್ಟಿದ್ದಾರೆ.

ಯುಶುಯಿ ಜಿಲ್ಲೆಯ ಅಂಗಡಿಯೊಂದರಲ್ಲಿ ಮಧ್ಯಾಹ್ನ 3 ಗಂಟೆಗೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಕೈಗೊಂಡಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ತಿಳಿಸಿದೆ.

ಈ ರೀತಿಯ ಅವಘಡಗಳು ಪದೇ ಪದೇ ಸಂಭವಿಸದಂತೆ ನೋಡಿಕೊಳ್ಳಲು ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT