ಮನಿಲಾ: ಫಿಲಿಪ್ಪೀನ್ಸ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 69 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ (ಸೆ.30) ರಾತ್ರಿ 10ರ ಸುಮಾರಿಗೆ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರಿ ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೊಗೊ ನಗರ ಹಾಗೂ ಸೆಬು ಪ್ರಾಂತ್ಯದ ಹೊರವಲಯದ ಪಟ್ಟಣಗಳಲ್ಲಿ ಮನೆ ಕಟ್ಟಡಗಳು ಹಾನಿಗೊಂಡಿವೆ ಎಂದು ಅವರು ಹೇಳಿದ್ದಾರೆ.

ಅವಶೇಷಗಳಡಿಯಲ್ಲಿ ಬದುಕುಳಿದವರನ್ನು ರಕ್ಷಿಸಲು ರಕ್ಷಣಾ ಪಡೆಗಳು ಕಠಿಣ ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಶ್ವಾನದಳ, ಪೊಲೀಸ್ ಸಿಬ್ಬಂದಿ ಹಾಗೂ ನಾಗರಿಕರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೊಗೊದಿಂದ ಈಶಾನ್ಯಕ್ಕೆ ಸುಮಾರು 19 ಕಿ.ಮೀ. ದೂರದಲ್ಲಿ ಐದು ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಭೀತಿ ಕಾಡುತ್ತಿದೆ.
.Earthquake | ಅಫ್ಗಾನಿಸ್ತಾನ ಭೂಕಂಪ: ಸಾವಿನ ಸಂಖ್ಯೆ 2205ಕ್ಕೆ ಏರಿಕೆ.ರಷ್ಯಾದಲ್ಲಿ ಮತ್ತೆ 7.0 ತೀವ್ರತೆಯ ಭೂಕಂಪ; ಜ್ವಾಲಾಮುಖಿ ಸ್ಫೋಟ, ಸುನಾಮಿ ಸಾಧ್ಯತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.