ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿನ ವಾಣಿಜ್ಯ ಕಟ್ಟಡವೊಂದಕ್ಕೆ ಲಘು ವಿಮಾನ ಡಿಕ್ಕಿಯಾಗಿದೆ. ದುರಂತದಲ್ಲಿ ಇಬ್ಬರು ಮೃತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ.

ಲಾಸ್ ಏಂಜಲೀಸ್ನಿಂದ ಆಗ್ನೇಯಕ್ಕೆ ಸುಮಾರು 40 ಕಿ.ಮೀ ದೂರದಲ್ಲಿರುವ ಪುಲ್ಲೆರ್ಟನ್ ಮುನಿಸಿಪಲ್ ವಿಮಾನ ನಿಲ್ದಾಣದ ಸಮೀಪ ಗುರುವಾರ ಮಧ್ಯಾಹ್ನ 2ರ ಸುಮಾರಿಗೆ ವಿಮಾನವು ಕಟ್ಟಡಕ್ಕೆ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೀಠೋಪಕರಣ ತಯಾರಿಕಾ ಕಂಪನಿಯ ಕಟ್ಟಡಕ್ಕೆ ಭಾರಿ ಹಾನಿಯಾಗಿದೆ. ಕಟ್ಟಡದಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹತ್ತು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಟು ಮಂದಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ ಎಂದು ಪುಲ್ಲರ್ಟನ್ ಪೊಲೀಸ್ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

ವಿಮಾನದಲ್ಲಿ ಎಷ್ಟು ಮಂದಿ ಇದ್ದರು, ಮೃತಪಟ್ಟಿರುವವರು ವಿಮಾನದಲ್ಲಿದ್ದವರೇ ಅಥವಾ ಘಟನಾ ಸ್ಥಳದಲ್ಲಿ ಇದ್ದವರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಅಪಘಾತಕ್ಕೀಡಾದ ವಿಮಾನ 'Van’s RV-10' ಎಂದು ತಿಳಿಸಿರುವ ಫೆಡರಲ್ ವಿಮಾನಯಾನ ಅಧಿಕಾರಿಗಳು, ಘಟನೆ ಕುರಿತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯೊಂದಿಗೆ ತನಿಖೆ ನಡೆಸುವುದಾಗಿ ಹೇಳಿದೆ.

ಕಳೆದವಾರವಷ್ಟೇ, ದಕ್ಷಿಣ ಕೊರಿಯಾದ ಮುವಾನ್ ಅಂತರರಾಷ್ಟ್ರೀಯ ವಿಮಾನದಲ್ಲಿ ಭಾರಿ ದುರಂತ ಸಂಭವಿಸಿತ್ತು. ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಿಂದ ಬಂದಿದ್ದ ವಿಮಾನ, ಲ್ಯಾಂಡಿಂಗ್ ವೇಳೆ ರನ್ವೇನಿಂದ ಜಾರಿ ಕಾಂಕ್ರಿಟ್ ಗೋಡೆಗೆ ಡಿಕ್ಕಿಯಾಗಿತ್ತು. ವಿಮಾನದಲ್ಲಿದ್ದ 181 ಮಂದಿಯ ಪೈಕಿ, 179 ಜನರು ಮೃತಪಟ್ಟಿದ್ದರು.
.ದ.ಕೊರಿಯಾ ವಿಮಾನ ದುರಂತ: 179 ಮಂದಿ ಸಾವು, ಇಬ್ಬರ ರಕ್ಷಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.