ಸಾವೊ ಪೌಲೊ: ಬ್ರೆಜಿಲ್‌ನ ಕಸ್ಕಾವೇಲ್ ನಗರದಿಂದ ಸೌವೊ ಪೌಲೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ವಿಮಾನವೊಂದು ವಿನೆದೊ ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಪತನಗೊಂಡಿದ್ದು, 62 ಮಂದಿ ಮೃತಪಟ್ಟಿದ್ದಾರೆ.
ವೊಪಾಸ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನದಲ್ಲಿ 58 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯಿದ್ದರು. ದುರಂತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ಬಿದ್ದ ಸ್ಥಳದಲ್ಲಿ ಬೆಂಕಿ ಮತ್ತು ಹೊಗೆ ಏಳುತ್ತಿರುವ ದೃಶ್ಯವನ್ನು ಬ್ರೆಜಿಲ್‌ನ ‘ಗ್ಲೋಬೊ ನ್ಯೂಸ್’ ಸುದ್ದಿವಾಹಿನಿ ಪ್ರಸಾರ ಮಾಡಿದೆ. ವಿಮಾನ ಪತನಗೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.