ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಎಇ ಅಧ್ಯಕ್ಷರೊಂದಿಗೆ ಮೋದಿ ಮಾತುಕತೆ: ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಚರ್ಚೆ

Published 2 ಡಿಸೆಂಬರ್ 2023, 3:01 IST
Last Updated 2 ಡಿಸೆಂಬರ್ 2023, 3:01 IST
ಅಕ್ಷರ ಗಾತ್ರ

ದುಬೈ: ಇಸ್ರೇಲ್‌–ಹಮಾಸ್‌ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದುಬೈನಲ್ಲಿ ನಡೆಯುತ್ತಿರುವ ಸಿಒಪಿ–28ರ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಹಾಗೂ ಮೊಹಮ್ಮದ್ ಬಿನ್ ಜಾಯೆದ್ ಭೇಟಿಯಾದರು. ಈ ವೇಳೆ ಉಭಯ ನಾಯಕರು ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಚರ್ಚಿಸಿದರು.

‘ನನ್ನ ಸಹೋದರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾಗಲು ನಾನು ಯಾವಾಗಲೂ ಸಂತೋಷಪಡುತ್ತೇನೆ. ಸಿಒಪಿ–28 ಶೃಂಗ ಸಭೆಗಾಗಿ ಅವರ ಆತ್ಮೀಯ ಆತಿಥ್ಯಕ್ಕಾಗಿ ಧನ್ಯವಾದಗಳು. ಭಾರತ ಹಾಗೂ ಯುಎಇ ಸ್ನೇಹವನ್ನು ಬಲಪಡಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ' ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT