ನಿಕೋಷಿಯಾ: ಪ್ರಧಾನಿ ನರೇಂದ್ರ ಮೋದಿ ಅವರು ಸೈಪ್ರಸ್ಗೆ ಭಾನುವಾರ ಭೇಟಿ ನೀಡಿದ್ದಾರೆ. ಎರಡು ದಿನಗಳ ಭೇಟಿ ಸಂದರ್ಭದಲ್ಲಿ ಅವರು ಅಧ್ಯಕ್ಷ ನಿಕೋಸ್ ಕ್ರಿಸ್ಟೊಡೌಲಿಡ್ಸ್ ಅವರೊಂದಿಗೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಕುರಿತು ಚರ್ಚಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕ್ರಿಸ್ಟೊಡೌಲಿಡ್ಸ್ ಅವರು ವಿಮಾನ ನಿಲ್ದಾಣದಲ್ಲಿಯೇ ಬರಮಾಡಿಕೊಂಡರು.

ಎರಡು ದಶಕಗಳಲ್ಲಿ ಸೈಪ್ರಸ್ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಯೂ ಮೋದಿ ಅವರದ್ದಾಗಿದೆ.

‘ವಿಶೇಷವಾಗಿ ಬರಮಾಡಿಕೊಂಡ ಸೈಪ್ರಸ್ ಅಧ್ಯಕ್ಷರಿಗೆ ಧನ್ಯವಾದಗಳು. ಈ ಭೇಟಿಯು ಭಾರತ–ಸೈಪ್ರಸ್ ಸಂಬಂಧದ ಹೊಸ ಮನ್ವಂತರಕ್ಕೆ ನಾಂದಿಯಾಗಲಿದೆ’ ಎಂದು ಮೋದಿ ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.

ಮೋದಿ ಅವರು ಸೈಪ್ರಸ್ ನಂತರ ಕೆನಡಾಗೆ ಭೇಟಿ ನೀಡಲಿದ್ದಾರೆ. ‘ಜಿ7’ ರಾಷ್ಟ್ರಗಳ ಶೃಂಗಸಭೆಯಲ್ಲಿ ಪಾಲ್ಗೊಂಡ ಬಳಿಕ ಕ್ರೊಯೇಷ್ಯಾಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದೇಶಗಳಿಗೆ ಭೇಟಿ ನೀಡುವ ಶಕ್ತಿ ಉತ್ಸಾಹ ಇದೆ. ಆದರೆ ಸಂಕಷ್ಟದಲ್ಲಿರುವ ಮಣಿಪುರಕ್ಕೆ ಹೋಗುವಂತಹ ಅಂತಃಕರಣವಿಲ್ಲ.
- ಜೈರಾಮ್ ರಮೇಶ್ ಕಾಂಗ್ರೆಸ್ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.