ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಟಲಿ | ಜಿ7 ಸಭೆಯಲ್ಲಿ ಮೋದಿ– ಕೆನಡಾ ಪ್ರಧಾನಿ ಟ್ರುಡೊ ಮಾತುಕತೆ

Published 15 ಜೂನ್ 2024, 2:27 IST
Last Updated 15 ಜೂನ್ 2024, 2:27 IST
ಅಕ್ಷರ ಗಾತ್ರ

ಬಾರಿ(ಇಟಲಿ): ಇಟಲಿಯಲ್ಲಿ ನಡೆಯುತ್ತಿರುವ ಜಿ7 ರಾಷ್ಟ್ರಗಳ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.

‘ಜಿ7 ಶೃಂಗಸಭೆಯಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರನ್ನು ಭೇಟಿಯಾಗಿದ್ದೇನೆ’ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಖಾಲಿಸ್ತಾನಿ ಪ್ರತ್ಯೇಕವಾದಿ ನಾಯಕ ಹರ್‌ದೀಪ್‌ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾದ ನಡುವಿನ ದ್ವಿಪಕ್ಷೀಯ ಬಾಂಧವ್ಯ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ಪ್ರಾಮುಖ್ಯತೆ ಪಡೆದಿದೆ.

ಉಭಯ ನಾಯಕರ ನಡುವೆ ಏನೆಲ್ಲ ಮಾತುಕತೆ ನಡೆದಿದೆ ಎಂಬ ಬಗ್ಗೆ ಮಾಹಿತಿ ಇಲ್ಲ.

ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ಖಾಲಿಸ್ತಾನಿ ಹೋರಾಟಗಾರ ಹರ್‌ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯಲ್ಲಿ ಭಾರತದ ಏಜೆಂಟರ ಕೈವಾಡವಿದೆ ಎಂದು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಟ್ಯೂಡೊ ಆರೋಪಿಸಿದ್ದರು. 'ಆರೋಪ ಅಸಂಬದ್ಧ' ಎಂದಿದ್ದ ಭಾರತ, ಕೆನಡಾದ ವಾದವನ್ನು ನಿರಾಕರಿಸಿತ್ತು. ಅದು ಭಾರತ ಮತ್ತು ಕೆನಡಾ ನಡುವೆ ಸಂಬಂಧ ಹಳಸಲು ಕಾರಣವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT