ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘರ್ಷಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳಿ: ಇಸ್ರೇಲ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ

Published 1 ಡಿಸೆಂಬರ್ 2023, 13:32 IST
Last Updated 1 ಡಿಸೆಂಬರ್ 2023, 13:32 IST
ಅಕ್ಷರ ಗಾತ್ರ

ದುಬೈ: ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರ್ಜೋಗ್ ಅವರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ, ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಡುವಿನ ಸಂಘರ್ಷಕ್ಕೆ ಶೀಘ್ರ ಮತ್ತು ದೀರ್ಘಕಾಲೀನ ಪರಿಹಾರ ಕಂಡುಕೊಳ್ಳಲು ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.

ದುಬೈನಲ್ಲಿ ನಡೆಯುತ್ತಿರುವ ಕೋಪ್‌28 ವಿಶ್ವ ಹವಾಮಾನ ಕ್ರಿಯಾ ಶೃಂಗದಲ್ಲಿ ಮೋದಿ, ಹೆರ್ಜೋಗ್ ಅವರನ್ನು ಭೇಟಿಯಾದರು.

ಡಿಸೆಂಬರ್ 7ರಂದು ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ದಾಳಿಯಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ ಮೋದಿ, ಒತ್ತೆಯಾಳುಗಳ ಬಿಡುಗಡೆಯನ್ನು ಸ್ವಾಗತಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ಮಾರಣಾಂತಿಕ ದಾಳಿಗೆ ಪ್ರತಿಯಾಗಿ ಇಸ್ರೇಲ್ ಯುದ್ಧ ಆರಂಭಿಸಿದೆ.

ಇಸ್ರೇಲ್–ಹಮಾಸ್ ಸಂಘರ್ಷದ ಕುರಿತಂತೆ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

‘ಯುದ್ಧದ ಪರಿಣಾಮ ಎದುರಿಸುತ್ತಿರುವ ಜನರಿಗೆ ಮಾನವೀಯ ನೆರವು ನೀಡಬೇಕು. ಆದಷ್ಟು ಶೀಘ್ರ ಮತ್ತು ದೀರ್ಘಕಾಲೀನ ಪರಿಹಾರ ಕಂಡುಕೊಳ್ಳಲು ಭಾರತದ ಬೆಂಬಲವನ್ನು ಪ್ರಧಾನಿ ಒತ್ತಿ ಹೇಳಿದ್ದಾರೆ’ ಎಂದು ಬಾಗ್ಚಿ ಹೇಳಿದರು.

‘ಕೋಪ್28 ಶೃಂಗದಲ್ಲಿ ನಾನು ಹಲವು ಜಾಗತಿಕ ನಾಯಕರನ್ನು ಭೇಟಿಯಾದೆ. ಒತ್ತೆಯಾಳುಗಳ ಬಿಡುಗಡೆಗೆ ಮಾಡಿಕೊಂಡಿದ್ದ ಯುದ್ಧ ವಿರಾಮ ಒಪ್ಪಂದವನ್ನು ಹಮಾಸ್ ಪದೇ ಪದೇ ಉಲ್ಲಂಘಿಸಿದ ಬಗ್ಗೆ ಮಾತನಾಡಿದ್ದೇನೆ’ಎಂದು ಹೆರ್ಜೋಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT