ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.14ಕ್ಕೆ ಅಬುಧಾಬಿಯ ಮೊದಲ ಹಿಂದು ದೇವಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

Published 8 ಫೆಬ್ರುವರಿ 2024, 2:22 IST
Last Updated 8 ಫೆಬ್ರುವರಿ 2024, 2:22 IST
ಅಕ್ಷರ ಗಾತ್ರ

ಅಬುಧಾಬಿ: ಅಬುಧಾಬಿಯಲ್ಲಿ ನಿರ್ಮಾಣವಾದ ಹಿಂದು ದೇವಾಲಯವನ್ನು ಫೆಬ್ರುವರಿ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಸ್ವಾಮಿನಾರಾಯಣ ಸಂಸ್ಥೆಯ (ಬಿಎಪಿಎಸ್) ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ದೇವಾಲಯವನ್ನು ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ನಿರ್ಮಿಸಿದ್ದು, ಯುಎಇಯ ಮೊದಲ ಸಾಂಪ್ರದಾಯಿಕ ಕಲ್ಲಿನ ಹಿಂದೂ ದೇವಾಲಯವಾಗಿದೆ.

ಅಬು ಮುರೇಖಾ ಜಿಲ್ಲೆಯಲ್ಲಿ 27 ಎಕರೆ ಜಾಗದಲ್ಲಿ ಈ ದೇವಾಲಯ ತಲೆ ಎತ್ತಿದೆ. ಉದ್ಘಾಟನೆ ಹಿನ್ನೆಲೆ ಬಿಎಪಿಎಸ್‌ನ ಆಧ್ಯಾತ್ಮಿಕ ಗುರು ಸ್ವಾಮಿ ಮಹಂತ್ ಸ್ವಾಮಿ ಮಹಾರಾಜ್ ಅವರು ಯುಎಇಗೆ ಆಗಮಿಸಿದ್ದಾರೆ.

ಈ ಮಂದಿರದ ಉದ್ಘಾಟನೆಯನ್ನು ‘ಸೌಹಾರ್ದತೆಯ ಹಬ್ಬ’ದಂತೆ ಆಚರಿಸಲಾಗುತ್ತದೆ. ನಂಬಿಕೆಯನ್ನು ಬಲಪಡಿಸುವುದು, ಎಲ್ಲಾ ತಲೆಮಾರುಗಳು ಮತ್ತು ಹಿನ್ನೆಲೆಗಳುಳ್ಳ ಜನರ ನಡುವೆ ಸಾಮರಸ್ಯವನ್ನು ಬೆಳೆಸುವುದು ಈ ಉದ್ಘಾಟನಾ ಕಾರ್ಯಕ್ರಮದ ಧ್ಯೇಯವಾಗಿದೆ ಎಂದು ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಈ ಭೇಟಿ ಭಾರತ ಮತ್ತು ಯುಎಇ ನಡುವಿನ ನಿಕಟ ಸಂಬಂಧವನ್ನು ಮತ್ತಷ್ಟು ‌ಹೆಚ್ಚಿಸಲಿದೆ ಎಂದು ವಿಶ್ಲೇಷಿಸಲಾಗಿದೆ. ಪ್ರಧಾನಮಂತ್ರಿಯಾಗಿ ಯುಎಇಗೆ ಇದು ಮೋದಿಯ ಏಳನೇ ಭೇಟಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT