ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

G7 Summit: ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ

Published 20 ಮೇ 2023, 10:48 IST
Last Updated 20 ಮೇ 2023, 10:48 IST
ಅಕ್ಷರ ಗಾತ್ರ

ನವದೆಹಲಿ: ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಉಕ್ರೇನ್ ಅಧ್ಯಕ್ಷ ವೊಲೊಡಿಯರ್ ಝೆಲೆನ್‌ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಜಪಾನ್‌ನ ಹಿರೋಶಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗ ಸಭೆಯ ವೇಳೆ ಉಭಯ ನಾಯಕರ ನಡುವೆ ಭೇಟಿ ನಡೆದಿದೆ.

ಈ ಸಂಬಂಧ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಉಭಯ ನಾಯಕರ ಚಿತ್ರ ಹಂಚಿಕೊಂಡಿದೆ.

ಕಳೆದ ವರ್ಷದ ಫೆಬ್ರುವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾದ ಸೇನಾ ಕಾರ್ಯಾಚರಣೆಯ ಬಳಿಕ ಈ ಇಬ್ಬರು ನಾಯಕರು ಇದೇ ಮೊದಲ ಬಾರಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT