ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

G7 Summit: ಸುನಕ್, ಮ್ಯಾಕ್ರಾನ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

Published 14 ಜೂನ್ 2024, 11:23 IST
Last Updated 14 ಜೂನ್ 2024, 11:23 IST
ಅಕ್ಷರ ಗಾತ್ರ

ಬೆಂಗಳೂರು: ಇಟಲಿಯಲ್ಲಿ ನಡೆಯುತ್ತಿರುವ ಜಿ7 ರಾಷ್ಟ್ರಗಳ ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ ಮೋದಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

'ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಭೇಟಿಯಿಂದ ಸಂತೋಷಗೊಂಡಿದ್ದೇನೆ. ಎನ್‌ಡಿಎ ಸರ್ಕಾರದ ಮೂರನೇ ಅವಧಿಯಲ್ಲಿ ಭಾರತ ಹಾಗೂ ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ. ಸೆಮಿಕಂಡಕ್ಟರ್‌ಗಳು, ತಂತ್ರಜ್ಞಾನ, ವ್ಯಾಪಾರ ಹಾಗೂ ರಕ್ಷಣಾ ವಲಯಗಳಲ್ಲಿ ಬಾಂಧವ್ಯ ಮತ್ತಷ್ಟು ದೃಢವಾಗಿಸಲು ಉತ್ತಮ ಅವಕಾಶವಿದೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

'ನನ್ನ ಗೆಳೆಯ, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ ಫಲಪ್ರದಾಯಕ ಚರ್ಚೆ ನಡೆಸಿದ್ದೇನೆ. ಒಂದು ವರ್ಷದಲ್ಲಿ ನಮ್ಮ ನಾಲ್ಕನೇ ಸಭೆ ಇದಾಗಿದ್ದು, ಶಕ್ತಿಯುತ ಭಾರತ-ಫ್ರಾನ್ಸ್ ಬಾಂಧವ್ಯಕ್ಕೆ ಆದ್ಯತೆ ನೀಡಿದ್ದೇವೆ. ರಕ್ಷಣೆ, ಭದ್ರತೆ, ತಂತ್ರಜ್ಞಾನ, ಎಐ, ಆರ್ಥಿಕತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಯುವ ಜನತೆಯಲ್ಲಿ ನಾವೀನ್ಯತೆ ಹಾಗೂ ಸಂಶೋಧನೆ ಹೇಗೆ ಉತ್ತೇಜಿಸಬೇಕು ಎಂಬುದರ ಕುರಿತು ಚರ್ಚಿಸಿದ್ದೇವೆ. ಮುಂದಿನ ವರ್ಷ ಪ್ಯಾರಿಸ್ ಒಲಿಂಪಿಕ್ಸ್‌ ಆಯೋಜಿಸುವ ಫ್ರಾನ್ಸ್‌ಗೆ ಶುಭಾಶಯಗಳನ್ನು ತಿಳಿಸಿದ್ದೇನೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT