ಪ್ಯಾರಿಸ್: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್ನಲ್ಲಿ ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಮತ್ತು ಅವರ ಪತ್ನಿ ಉಷಾ ವ್ಯಾನ್ಸ್ ಅವರನ್ನು ಭೇಟಿಯಾಗಿದ್ದಾರೆ.

ಪ್ಯಾರಿಸ್ನಲ್ಲಿ ನಡೆದ ‘ಎಐ ಆ್ಯಕ್ಷನ್’ ಶೃಂಗಸಭೆಯ ವೇಳೆ ವ್ಯಾನ್ಸ್ ದಂಪತಿಯನ್ನು ಮೋದಿ ಭೇಟಿಯಾಗಿದ್ದಾರೆ. ಇದೇ ವೇಳೆ ವ್ಯಾನ್ಸ್ ದಂಪತಿಯ ಮಕ್ಕಳಾದ ಇವಾನ್ ಮತ್ತು ವಿವೇಕ್ ಜೊತೆಗಿದ್ದರು. ಈ ಫೋಟೊಗಳನ್ನು ಮೋದಿ ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.

ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಮತ್ತು ಅವರ ಕುಟುಂಬದೊಂದಿಗೆ ಅದ್ಭುತವಾದ ಸಭೆಯನ್ನು ನಡೆಸಿದೆ. ನಾವು ವಿವಿಧ ವಿಷಯಗಳ ಬಗ್ಗೆ ಉತ್ತಮ ಸಂಭಾಷಣೆ ನಡೆಸಿದ್ದೇವೆ. ಇದೇ ವೇಳೆ ವಿವೇಕ್ ಸಂತೋಷದಾಯಕ ಜನ್ಮದಿನವನ್ನು ಆಚರಿಸಲು ಅವರೊಂದಿಗೆ ಸೇರಿದ್ದು ಸಂತೋಷವಾಗಿದೆ ಎಂದು ಮೋದಿ ತಿಳಿಸಿದ್ದಾರೆ.

ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲು ವಾಷಿಂಗ್ಟನ್ ಡಿಸಿಗೆ ತೆರಳುವುದಕ್ಕೂ ಮುನ್ನ ಜೆ.ಡಿ.ವ್ಯಾನ್ಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಡೊನಾಲ್ಡ್ ಟ್ರಂಪ್ ಜೊತೆಗೂಡಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ವ್ಯಾನ್ಸ್ ಅವರನ್ನು ಮೋದಿ ಅಭಿನಂದಿಸಿದ್ದಾರೆ. ಜೆ.ಡಿ. ವ್ಯಾನ್ಸ್ ಅವರು ಆಂಧ್ರಪ್ರದೇಶದ ಅಳಿಯ ಆಗಿದ್ದು, ವ್ಯಾನ್ಸ್ ಅವರ ಪತ್ನಿ ಉಷಾ ಚಿಲುಕುರಿ ಅವರು ತೆಲುಗು ಮೂಲದವರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.