ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ನಾಟು ನಾಟು' ಹಾಡಿಗೆ ಹೆಜ್ಜೆ ಹಾಕುತ್ತಿರುವ ಅಮೆರಿಕನ್ನರು: ಮೋದಿ ಭಾಷಣದ ಮುಖ್ಯಾಂಶಗಳು

Modi In USA: ಅಮೆರಿಕದಲ್ಲಿ ಜನಪ್ರಿಯ ಗಳಿಸುತ್ತಿರುವ ಕ್ರಿಕೆಟ್: ಪ್ರಧಾನಿ ಮೋದಿ
Published 23 ಜೂನ್ 2023, 4:57 IST
Last Updated 23 ಜೂನ್ 2023, 4:57 IST
ಅಕ್ಷರ ಗಾತ್ರ

ವಾಷಿಂಗ್ಟನ್: ಅಮೆರಿಕದಲ್ಲಿ ವಾಸಿಸುತ್ತಿರುವ ಅನಿವಾಸಿ ಭಾರತೀಯರು ಅಮೆರಿಕದ ಸರ್ವತೋಮುಖ ಪ್ರಗತಿಯಲ್ಲಿ ಮತ್ತು ಭಾರತದೊಂದಿಗಿನ ಬಾಂಧವ್ಯ ಬಲವರ್ಧನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಜಿಲ್ ಬೈಡನ್ ಶ್ವೇತ ಭವನದಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿ ಮೋದಿ ಈ ಕುರಿತು ಪ್ರತಿಪಾದಿಸಿದರು.

ಔತಣಕೂಟದಲ್ಲಿ 400ಕ್ಕೂ ಹೆಚ್ಚು ಮಂದಿ ಗಣ್ಯ ಅತಿಥಿಗಳು ಪಾಲ್ಗೊಂಡಿದ್ದಾರೆ. ಖ್ಯಾತ ಉದ್ಯಮಿಗಳಾದ ಮುಖೇಶ್ ಅಂಬಾನಿ, ಆನಂದ್ ಮಹೀಂದ್ರಾ, ಗೂಗಲ್ ಸಿಇಒ ಸುಂದರ್ ಪಿಚೈ, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ, ಆ್ಯಪಲ್ ಕಂಪನಿಯ ಸಿಇಒ ಟಿಮ್ ಕುಕ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದರು.

'ನಾಟು ನಾಟು' ಹಾಡಿಗೆ ಹೆಜ್ಜೆ ಹಾಕುತ್ತಿರುವ ಅಮೆರಿಕನ್ನರು...
ಭಾರತ ಹಾಗೂ ಅಮೆರಿಕದ ಬಾಂಧವ್ಯದ ಕುರಿತು ಪ್ರಸ್ತಾಪ ಮಾಡಿರುವ ಪ್ರಧಾನಿ ಮೋದಿ, ಭಾರತೀಯರು ಹಾಗೂ ಅಮೆರಿಕನ್ನರು ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ನಾವೀಗ ಒಬ್ಬನ್ನೊಬ್ಬರ ಹೆಸರನ್ನು ಸರಿಯಾಗಿ ಉಚ್ಚರಿಸಲು ಪ್ರಾರಂಭಿಸಿದ್ದೇವೆ. ಭಾರತೀಯ ಮಕ್ಕಳು ಹ್ಯಾಲೋವೀನ್‌‍ನಲ್ಲಿ ಸ್ಪೈಡರ್ ಮ್ಯಾನ್‌ಗಳಾಗುತ್ತಾರೆ. ಅಮೆರಿಕದ ಯುವ ಜನತೆ 'ನಾಟು ನಾಟು' ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಹೇಳಿದರು.

ಅಮೆರಿಕದಲ್ಲಿ ಕ್ರಿಕೆಟ್ ಜನಪ್ರಿಯ...

ಬೇಸ್‌ಬಾಲ್ ಪ್ರಿಯ ಅಮೆರಿಕದಲ್ಲಿ ಕ್ರಿಕೆಟ್ ಹೆಚ್ಚು ಜನಪ್ರಿಯವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತದಲ್ಲಿ ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಅರ್ಹತೆ ಗಿಟ್ಟಿಸಲು ಅಮೆರಿಕ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಅಮೆರಿಕ ತಂಡಕ್ಕೆ ನನ್ನ ಶುಭಕಾಮನೆಗಳು ಎಂದು ಹೇಳಿದರು.

ಅಮೆರಿಕ ಆರ್ಥಿಕತೆ ಬಲಪಡಿಸುವುದರಲ್ಲಿ ಭಾರತೀಯರ ಪಾತ್ರ...

ಅಮೆರಿಕದ ಆರ್ಥಿಕತೆ ಬಲವರ್ಧನೆಯಲ್ಲಿ ಅನಿವಾಸಿ ಭಾರತೀಯರು ಗಮನಾರ್ಹ ಪಾತ್ರ ವಹಿಸಿದ್ದಾರೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಭಾರತದ ಮೌಲ್ಯ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಹೆಮ್ಮೆಪಟ್ಟುಕೊಳ್ಳುವ ಅವರು ಅಮೆರಿಕದಲ್ಲಿ ಗೌರವಾನ್ವಿತ ಸ್ಥಾನ ಹೊಂದಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT