ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ. 22ರಂದು ಬ್ರಿಕ್ಸ್‌ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

Published 8 ಆಗಸ್ಟ್ 2023, 13:11 IST
Last Updated 8 ಆಗಸ್ಟ್ 2023, 13:11 IST
ಅಕ್ಷರ ಗಾತ್ರ

ಜೊಹಾನಸ್‌ಬರ್ಗ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಇದೇ 22ರಂದು ನಡೆಯಲಿರುವ ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ದಕ್ಷಿಣ ಆಫ್ರಿಕಾ ಸರ್ಕಾರ ತಿಳಿಸಿದೆ.

ಭಾರತದ ನಾಯಕ ಸಭೆಯಲ್ಲಿ ಭಾಗಿಯಾಗಲ್ಲ ಎಂದು ಕೆಲ ಮಾಧ್ಯಮಗಳು ವರದಿ ಮಾಡಿರುವುದನ್ನು ಇದೇ ಸಂದರ್ಭ ಅಲ್ಲಗಳೆದಿದೆ.

‘ಬ್ರಿಕ್ಸ್‌ನ 15ನೇ ಆವೃತ್ತಿಯ ಶೃಂಗಸಭೆಗೆ ಸಕಲ ತಯಾರಿ ನಡೆದಿದೆ. ಬ್ರೆಜಿಲ್, ಚೀನಾ, ಭಾರತ ಸೇರಿದಂತೆ ಆತಿಥೇಯ ದಕ್ಷಿಣ ಆಫ್ರಿಕಾದ ನಾಯಕರು ಈ ಸಭೆಯಲ್ಲಿ ಭಾಗಿಯಾಗಿ ಹಲವು ವಿಷಯಗಳ ಚರ್ಚೆ ನಡೆಸಲಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವರ್ಚುವಲ್ ಆಗಿ ಪಾಲ್ಗೊಳ್ಳಲಿದ್ದಾರೆ’ ಎಂದು ದಕ್ಷಿಣ ಆಫ್ರಿಕಾದ ಅಂತರರಾಷ್ಟ್ರೀಯ ಸಂಬಂಧಗಳು ಹಾಗೂ ಸಹಕಾರ ಸಚಿವ ನಲೆಡಿ ಪಂಡೊರ್ ಪತ್ರಕರ್ತರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT