ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

PM Modi France visit | ಪ್ರಧಾನಿ ಮೋದಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ

Published 14 ಜುಲೈ 2023, 2:28 IST
Last Updated 14 ಜುಲೈ 2023, 2:28 IST
ಅಕ್ಷರ ಗಾತ್ರ

ಪ್ಯಾರಿಸ್‌ : ಪ್ರಧಾನಿ ನರೇಂದ್ರ ಮೋದಿಯವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ ‘ಲೀಜನ್ ಆಫ್ ಆನರ್ ಗ್ರ್ಯಾಂಡ್ ಕ್ರಾಸ್‘ಅನ್ನು ನೀಡಿ ಗೌರವಿಸಲಾಗಿದೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇಂದು (ಶುಕ್ರವಾರ) ನಡೆಯುವ ಫ್ರಾನ್ಸ್‌ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.

ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಗಾಚಿ ಅವರು ಮೋದಿ ಅವರಿಗೆ ನೀಡಿದ ಪ್ರಶಸ್ತಿಯ ಸಮೇತ ಫೋಟೊವನ್ನು ಟ್ವೀಟ್‌ ಮಾಡಿದ್ದಾರೆ.

ಗುರುವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು ಫ್ರಾನ್ಸ್‌ನಲ್ಲಿ ಯುಪಿಐ ಬಳಕೆ ಮಾಡುವ ಒಪ್ಪಂದ ಮಾಡಿಕೊಂಡಿದ್ದಾರೆ. 

ಅಲ್ಲದೆ ಫ್ರಾನ್ಸ್‌ನ ಮಾರ್ಸೆಲ್ಲೆಯಲ್ಲಿ ಹೊಸ ಭಾರತೀಯ ದೂತಾವಾಸ ಕಚೇರಿಯನ್ನು ತೆರೆಯುವುದಾಗಿ ಘೋಷಿಸಿದರು. ಜತೆಗೆ ಐರೋಪ್ಯ ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈಗ ಐದು ವರ್ಷಗಳ ಅವಧಿಯ ನಂತರದ ಕೆಲಸದ ವೀಸಾಗಳನ್ನು ಪಡೆಯುತ್ತಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT