ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ನ್ಯುಮೋನಿಯಾದಿಂದ 220 ಮಕ್ಕಳ ಸಾವು

Published 27 ಜನವರಿ 2024, 15:43 IST
Last Updated 27 ಜನವರಿ 2024, 15:43 IST
ಅಕ್ಷರ ಗಾತ್ರ

ಲಾಹೋರ್: ಕಳೆದ ಮೂರು ವಾರಗಳಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನ್ಯುಮೋನಿಯಾದಿಂದ 220 ಮಕ್ಕಳು ಮೃತಪಟ್ಟಿವೆ. ತೀವ್ರ ಚಳಿಯ ವಾತಾವರಣವೂ ಇದಕ್ಕೆ ಕಾರಣವಾಗಿದೆ ಎಂದು ಸರ್ಕಾರ ದೃಢಪಡಿಸಿದೆ.

ಮೃತಪಟ್ಟ ಹೆಚ್ಚಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರು ಹಾಗೂ ನ್ಯುಮೋನಿಯಾ ಲಸಿಕೆ ಪಡೆದಿರಲಿಲ್ಲ ಎಂದು ಅಲ್ಲಿನ ಸ್ಥಳಿಯ ಸರ್ಕಾರ ಮಾಹಿತಿ ನೀಡಿದೆ.

ಹವಾಮಾನ ವೈಪರೀತ್ಯದ ಕಾರಣ ಈ ಪ್ರಾಂತ್ಯದಲ್ಲಿ ಜನವರಿ 31ರವರೆಗೆ ಬೆಳಿಗ್ಗೆ ತರಗತಿ ನಡೆಸದಂತೆ ಸರ್ಕಾರ ಈಗಾಗಲೇ ಶಾಲೆಗಳಿಗೆ ಸೂಚಿಸಿದೆ.

ಜನವರಿ 1ರಿಂದ ಪಂಜಾಬ್‌ ಪ್ರಾಂತ್ಯದಲ್ಲಿ ಒಟ್ಟು 10,520 ನ್ಯುಮೋನಿಯಾ ಪ್ರಕರಣಗಳು ವರದಿಯಾಗಿವೆ. 220 ಮಕ್ಕಳು ಮೃತಪಟ್ಟಿದ್ದು, ಅವರೆಲ್ಲರೂ 5 ವರ್ಷದೊಳಗಿನವರು ಎಂದು ಸರ್ಕಾರ ತಿಳಿಸಿದೆ. ಪಂಜಾಬ್‌ನ ಪ್ರಾಂತೀಯ ರಾಜಧಾನಿ ಲಾಹೋರ್‌ನಲ್ಲಿಯೇ 47 ಮಕ್ಕಳು ಮೃತಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT