ಬ್ಯಾಂಕಾಕ್: ಥಾಯ್ಲೆಂಡ್‌ನ ಮಕ್ಕಳ ಆರೈಕೆ ಕೇಂದ್ರದಲ್ಲಿ ಗುಂಡಿನ ದಾಳಿ ನಡೆದಿದ್ದು, 30 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ನೊಂಗ್ಬುವಾ ಲಂಫೂ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಮಧ್ಯಾಹ್ನ ಆರೈಕೆ ಕೇಂದ್ರಕ್ಕೆ ನುಗ್ಗಿದ ಬಂದೂಕುಧಾರಿ ವ್ಯಕ್ತಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದಾನೆ ಎಂದು ಪೊಲಿಸ್ ಮೇಜರ್ ಜನರಲ್ ಅಚಯೊನ್ ಕ್ರೈಥಾಂಗ್ ತಿಳಿಸಿದ್ದಾರೆ.

30 ಮಂದಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದು, ಹೆಚ್ಚಿನ ಮಾಹಿತಿ ನೀಡಿಲ್ಲ. ದಾಳಿ ಬಳಿಕ ಬಂದೂಕುಧಾರಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

23 ಮಕ್ಕಳು, ಇಬ್ಬರು ಶಿಕ್ಷಕರು ಮತ್ತು ಒಬ್ಬ ಪೊಲೀಸ್ ಮೃತಪಟ್ಟಿರುವುದು ಈವರೆಗೆ ದೃಢಪಟ್ಟಿದೆ ಎಂದು ಪ್ರಾದೇಶಿಕ ಸಾರ್ವಜನಿಕ ವ್ಯವಹಾರಗಳ ಕಚೇರಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.