ಹಾಲಿ ಅಧ್ಯಕ್ಷ ರಾನಿಲ್ ವಿಕ್ರಮ್‌ಸಿಂಘೆ ಅವರು ಚುನಾವಣಾ ಕಣದಲ್ಲಿದ್ದಾರೆ. ಇವರಿಗೆ ಎದುರಾಳಿಗಳಾಗಿ ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ಪಕ್ಷದ ಅಧ್ಯಕ್ಷ ಅನುರಕುಮಾರ ದಿಸನಾಯಕೆ ಮತ್ತು ವಿರೋಧ ಪಕ್ಷದ ಪ್ರಮುಖ ನಾಯಕ, ಸಮಾಗಿ ಜನ ಬಲವೆಗಯ ಪಕ್ಷದ ಸಜಿತ್ ಪ್ರೇಮದಾಸ ಅವರು ಸ್ಪರ್ಧಿಸಿದ್ದಾರೆ.
‘1982ರ ಬಳಿಕ ಶ್ರೀಲಂಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಗಳಲ್ಲಿ ಮೂವರು ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವುದು ಇದೇ ಮೊದಲು’ ಎಂದು ರಾಜಕೀಯ ತಜ್ಞರು ತಿಳಿಸಿದ್ದಾರೆ.