ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಡವರ ಅಳಲು, ಅಗತ್ಯಗಳನ್ನು ನಿರ್ಲಕ್ಷಿಸಬೇಡಿ: ಶ್ರೀಲಂಕಾದ ನಾಯಕರಿಗೆ ಪೋಪ್ ಮನವಿ

Published : 10 ಜುಲೈ 2022, 12:24 IST
ಫಾಲೋ ಮಾಡಿ
Comments

ವ್ಯಾಟಿಕನ್‌ ಸಿಟಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಜಗತ್ತಿನಾದ್ಯಂತ ಸದ್ದು ಮಾಡುತ್ತಿವೆ.

ಇದೇ ವೇಳೆ, ಶ್ರೀಲಂಕಾ ನಾಯಕರನ್ನು ಉದ್ದೇಶಿಸಿ ಹೇಳಿಕೆ ನೀಡಿರುವ ಪೋಪ್ ಫ್ರಾನ್ಸಿಸ್, ‘ಬಡವರ ಅಳಲು ಮತ್ತು ಅಗತ್ಯಗಳನ್ನು ನಿರ್ಲಕ್ಷಿಸಬೇಡಿ’ ಎಂದು ಮನವಿ ಮಾಡಿದ್ದಾರೆ.

‘ಶ್ರೀಲಂಕಾ ದೇಶದ ಬಿಷಪ್‌ಗಳ ಪರವಾಗಿ ನಾನು ಶಾಂತಿಗಾಗಿ ಮನವಿ ಮಾಡುತ್ತೇನೆ’ ಎಂದು ಪೋಪ್‌ ಹೇಳಿದ್ದಾರೆ.

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶದ ಕಟ್ಟೆ ಒಡೆದಿದೆ. ರಾನಿಲ್ ವಿಕ್ರಮಸಿಂಘೆ ಅವರು ಶನಿವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಉದ್ರಿಕ್ತರ ಗುಂಪು ಅವರ ನಿವಾಸದ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದೆ.

ಇದಕ್ಕೂ ಮುನ್ನ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ ನೀಡುವಂತೆ ಒತ್ತಾಯಿಸಿ, ಅವರ ಗೃಹಕಚೇರಿಗೆ ಪ್ರತಿಭಟನಕಾರರು ನುಗ್ಗಿದ್ದು, ದಾಂಧಲೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT