ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಸರ್ಕಾರ ರಚನೆ ಕಸರತ್ತು: ಪಿಎಂಎಲ್‌–ಪಿಪಿಪಿ ಮೈತ್ರಿ?

Published 21 ಫೆಬ್ರುವರಿ 2024, 2:47 IST
Last Updated 21 ಫೆಬ್ರುವರಿ 2024, 2:47 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಸಮ್ಮಿಶ್ರ ಸರ್ಕಾರ ರಚಿಸುವ ಕುರಿತಂತೆ ಹಲವು ಸುತ್ತಿನ ಮಾತುಕತೆಯ ನಂತರ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್‌–ಎನ್‌) ಮತ್ತು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ(ಪಿಪಿಪಿ) ಅಂತಿಮ ಒಪ್ಪಂದಕ್ಕೆ ಬಂದಿವೆ ಎಂದು ಉಭಯ ಪಕ್ಷದ ಹಿರಿಯ ನಾಯಕರು ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಪಿಪಿ ಮುಖ್ಯಸ್ಥ ಬಿಲಾವಲ್ ಭುಟ್ಟೋ ಜರ್ದಾರಿ, ‘ಪಿಎಂಎಲ್‌–ಎನ್‌ ಅಧ್ಯಕ್ಷ ಶೆಹಬಾಜ್ ಷರೀಫ್‌ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಪಿಪಿಪಿಯ ಆಸಿಫ್‌ ಜರ್ದಾರಿ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ’ ಎಂದರು.

‘ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ‘ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್’(ಪಿಟಿಐ) ಪಕ್ಷದ ಬೆಂಬಲಿತ ಅಭ್ಯರ್ಥಿಗಳು ‘ಸುನ್ನಿ ಇತ್ತೆಹಾದ್ ಕೌನ್ಸಿಲ್’ (ಎಸ್‌ಐಸಿ)ನೊಂದಿಗೆ ಸರ್ಕಾರ ರಚಿಸಲು ಹೊರಟಿದ್ದು, ಸಂಸತ್ತಿನಲ್ಲಿ ಸರಳ ಬಹುಮತ ಸಾಧಿಸಲು ವಿಫಲವಾಗಿವೆ. ಸರ್ಕಾರ ರಚನೆಗೆ ಬೇಕಾದ ಅಗತ್ಯ ಸಂಖ್ಯೆಯನ್ನು ನಾವು ಹೊಂದಿದ್ದು, ಮೈತ್ರಿ ಸರ್ಕಾರ ರಚನೆಗೆ ಮುಂದಡಿ ಇಟ್ಟಿದ್ದೇವೆ’ ಎಂದು ತಿಳಿಸಿದ್ದಾರೆ.

ಫೆಬ್ರುವರಿ 8ರಂದು ನಡೆದ ಚುನಾವಣೆಯಲ್ಲಿ ಪಿಎಂಎಲ್-ಎನ್ 75 ಸ್ಥಾನಗಳನ್ನು ಗೆದ್ದರೆ, ಪಿಪಿಪಿ 54 ಸ್ಥಾನಗಳನ್ನು ಪಡೆದಿತ್ತು. 17 ಸ್ಥಾನಗಳನ್ನು ಗೆದ್ದ ‘ಮುತ್ತಾಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್’ ಪಕ್ಷ ಕೂಡ ಮೈತ್ರಿಗೆ ಬೆಂಬಲ ಸೂಚಿಸಿದೆ.

ಇಮ್ರಾನ್ ಖಾನ್ ಅವರ ಬೆಂಬಲಿತ ‘ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್’ 93 ಸ್ಥಾನಗಳನ್ನು ಗೆದ್ದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT