ಕ್ವೀಟೊ: ಈಕ್ವೆಡಾರ್ ಅಧ್ಯಕ್ಷೀಯ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಅಭ್ಯರ್ಥಿ ಫೆರ್ನಾಂಡೊ ವಿಲ್ಲಾವಿಸೆನ್ಸಿಯೊ (59) ಅವರನ್ನು ಬುಧವಾರ ಸಂಜೆ ಹತ್ಯೆ ಮಾಡಲಾಗಿದೆ ಎಂದು 'ನ್ಯೂಯಾರ್ಕ್ ಟೈಮ್ಸ್' ವರದಿ ಮಾಡಿದೆ.
ರಾಜಧಾನಿ ಕ್ವೀಟೊ ನಗರದ ಶಾಲೆಯೊಂದರಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುವ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿ ಹೊರಬರುತ್ತಿದ್ದ ವೇಳೆ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
'ಅವರು (ಫೆರ್ನಾಂಡೊ ವಿಲ್ಲಾವಿಸೆನ್ಸಿಯೊ) ಬಾಗಿಲಿನ ಮೂಲಕ ಹೊರಬರುತ್ತಿದ್ದಂತೆಯೇ ಗುಂಡಿನ ದಾಳಿ ನಡೆಯಿತು. ಗುಂಡು ತಲೆಗೆ ಬಿದ್ದಿದ್ದರಿಂದ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲಿಲ್ಲ' ಎಂದು ಬೆಂಬಲಿಗರೊಬ್ಬರು ತಿಳಿಸಿದ್ದಾರೆ.
ಪತ್ರಕರ್ತರಾಗಿದ್ದ ಅವರು ಈ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಕಣದಲ್ಲಿದ್ದ 8 ಜನರಲ್ಲಿ ಒಬ್ಬರಾಗಿದ್ದರು. ದೇಶದಲ್ಲಿನ ಭ್ರಷ್ಟಾಚಾರ, ಸಂಘಟಿತ ಅಪರಾಧ ಕೃತ್ಯಗಳು ಮತ್ತು ಸರ್ಕಾರಿ ಅಧಿಕಾರಿಗಳ ಸಂಬಂಧದ ಕುರಿತು ಜನರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.