ಓಸ್ಲೋ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾರ್ವೆ ದೇಶದ ಅತ್ಯುನ್ನತ್ತ ನಾಗರಿಕ ಪ್ರಶಸ್ತಿ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್' ಅನ್ನು ನೀಡಿ ಗೌರವಿಸಲಾಗಿದೆ.

ಇದು ಪ್ರಧಾನಿ ಮೋದಿ ಅವರಿಗೆ ದೊರೆತ 32ನೇ ಅಂತರರಾಷ್ಟ್ರೀಯ ಗೌರವವಾಗಿದೆ.

ನಾರ್ವೆ ದೇಶದ ಹಿತಾಸಕ್ತಿ ಹಾಗೂ ಅಂತರರಾಷ್ಟ್ರೀಯ ಬಾಂಧವ್ಯದಲ್ಲಿ ಅಪಾರವಾದ ಕೊಡುಗೆಗಾಗಿ ಗ್ರ್ಯಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಕಳೆದ ದಿನವಷ್ಟೇ ಪ್ರಧಾನಿ ಮೋದಿ ಅವರಿಗೆ ಸ್ವೀಡನ್ ಸರ್ಕಾರದ ಪ್ರತಿಷ್ಠಿತ 'ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್' ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸ್ವೀಡನ್ ಸರ್ಕಾರವು ವಿದೇಶಿ ನಾಯಕರಿಗೆ ನೀಡುವ ಅತ್ಯುನ್ನತ ಗೌರವ ಇದಾಗಿದೆ.

ಸ್ವೀಡನ್ ಬಳಿಕ ಎರಡು ದಿನಗಳ ನಾರ್ವೆ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮೊದಲ ಬಾರಿಗೆ ಆ ದೇಶಕ್ಕೆ ಭೇಟಿ ನೀಡಿದ್ದಾರೆ. ಕಳೆದ 43 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರ ಮೊದಲ ಭೇಟಿಯೂ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.