ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಷಿಂಗ್ಟನ್‌: ಇಸ್ರೇಲ್‌ ಜತೆ ಒಪ್ಪಂದ ವಿರೋಧಿಸಿ ಪ್ರತಿಭಟನೆ

Published 24 ಏಪ್ರಿಲ್ 2024, 14:17 IST
Last Updated 24 ಏಪ್ರಿಲ್ 2024, 14:17 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ‘ಇಸ್ರೇಲ್‌ ಅಥವಾ ಗಾಜಾ ಯುದ್ಧಕ್ಕೆ ಬೆಂಬಲ ನೀಡುವ ಯಾವುದೇ ಕಂಪನಿಗಳ ಜತೆ ವಿಶ್ವವಿದ್ಯಾಲಯಗಳು ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳಬಾರದು’ ಎಂದು ಆಗ್ರಹಿಸಿ ಪ್ಯಾಲೆಸ್ಟೀನ್‌ ಪರ ಒಲವು ಹೊಂದಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕ್ಯಾಲಿಫೋರ್ನಿಯಾದ ಮೆಸಾಚ್ಯುಸೆಟ್ಸ್‌ ವಿಶ್ವವಿದ್ಯಾಲಯದ ಆವರಣದಲ್ಲಿ ಸೇರಿದ ನೂರಾರು ವಿದ್ಯಾರ್ಥಿಗಳು, ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದಿದ್ದಾರೆ.

ಇಸ್ರೇಲ್‌ ಮಿಲಿಟರಿ ಬಲಪಡಿಸಲು ನೆರವಾಗುವ ಕಂಪನಿಗಳಿಂದ ವಿಶ್ವವಿದ್ಯಾಲಯಗಳು ದೂರ ಇರಬೇಕು ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸುವ ಕಂಪನಿಗಳ ಜತೆ ಯಾವುದೇ ವ್ಯವಹಾರ ಮಾಡಬಾರದು. ಜತೆಗೆ ಇಸ್ರೇಲ್‌ನಿಂದ ಸ್ವೀಕರಿಸುವ ಹಣ ಮತ್ತು ಬಳಕೆಯ ಬಗ್ಗೆ ಪಾರದರ್ಶಕತೆ ಕಾಪಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಇಸ್ರೇಲ್‌ ಜತೆಗಿನ ಶೈಕ್ಷಣಿಕ ಒಪ್ಪಂದಗಳನ್ನು ಸಹ ಸ್ಥಗಿತಗೊಳಿಸಬೇಕು ಎಂದು ಕೆಲವು ಕಾಲೇಜುಗಳ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಹಲವು ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಅಧಿಕಾರಿಗಳು, ‘ವಿದ್ಯಾರ್ಥಿಗಳ ಪ್ರತಿಭಟಿಸುವ ಹಕ್ಕು ಗೌರವಿಸುತ್ತೇವೆ. ಆದರೆ, ವಿದ್ಯಾರ್ಥಿಗಳು ಕೈಗೊಂಡಿರುವ ನಿರ್ಣಯಗಳನ್ನು ತಿರಸ್ಕರಿಸುತ್ತೇವೆ’ ಎಂದು ಹೇಳಿದ್ದಾರೆ.

ತೀವ್ರಗೊಂಡ ಪ್ರತಿಭಟನೆ ಜೆರುಸಲೇಂ

ಅಮೆರಿಕದ‌ಲ್ಲಿರುವ ಪ್ಯಾಲೆಸ್ಟೀನ್‌ ಪರ ಒಲವನ್ನು ಹೊಂದಿರುವ ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ಉತ್ತರ ಕ್ಯಾಲಿಫೋರ್ನಿಯಾದ ಕಾಲೇಜೊಂದರ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ‌ ತೀವ್ರಗೊಳ್ಳುತ್ತಿದೆ. ಪ್ರತಿಭಟನಕಾರರು ಮತ್ತು ವಿಶ್ವವಿದ್ಯಾನಿಲಯಗಳ ನಡುವಿನ ಘರ್ಷಣೆ ಮುಂದುವರಿದಿದೆ. ಕೊಲಂಬಿಯಾ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಪ್ರತಿಭಟನೆ ನಿಲ್ಲಿಸುವಂತೆ ಪ್ರತಿಭಟನಕಾರರಿಗೆ ಗಡುವು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT