ಮ್ಯಾಂಡಲೆ (ಮ್ಯಾನ್ಮಾರ್): ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತದ ವಿರುದ್ಧದ ಹೋರಾಟವನ್ನು ಹತ್ತಿಕ್ಕಲು ಭದ್ರತಾ ಪಡೆಗಳು ನಡೆಸುತ್ತಿರುವ ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಪ್ರತಿಭಟನಾಕಾರರು ತಮ್ಮದೇ ಆದ ಹೊಸ ಹೊಸ ತಂತ್ರಗಳನ್ನು ರೂಪಿಸುತ್ತಿದ್ದಾರೆ.

ಭದ್ರತಾ ಪಡೆಗಳು ನಡೆಸುವ ದಾಳಿಯಿಂದ ರಕ್ಷಿಸಿಕೊಳ್ಳಲು ಪ್ರತಿಭಟನಾಕಾರರು ತಮ್ಮ ಮನೆಗಳಲ್ಲೇ ತಯಾರಿಸಿದ ಗುರಾಣಿಗಳನ್ನು ಬಳಸತೊಡಗಿದ್ದಾರೆ.

ಮ್ಯಾನ್ಮಾರ್‌ನ ಎರಡನೇ ದೊಡ್ಡ ನಗರವಾಗಿರುವ ಮ್ಯಾಂಡಲೆಯಲ್ಲಿ ಸಾವಿರಾರು ಪ್ರತಿಭಟನಾಕಾರರು ಮಂಗಳವಾರ ಮೂರು ಬೆರಳುಗಳ ಸೆಲ್ಯೂಟ್‌ನಿಂದ ಗುರುತಿಸಲ್ಪಟ್ಟ ಗುರಾಣಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಇದು ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ನಡೆಯುತ್ತಿರುವ ಚಳುವಳಿಯ ಸಂಕೇತವಾಗಿದೆ.

ಜನರನ್ನು ಒಂದೆಡೆ ಗುಂಪಾಗಿ ಸೇರುವುದನ್ನು ತಡೆಯಲು ಪೊಲೀಸರು ಪ್ರಯತ್ನಿಸಿರುವಂತೆ, ಪ್ರತಿಭಟನಾಕಾರರು ನೂತನ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ತಮ್ಮ ಗುಂಪುಗಳನ್ನು ಚದುರಿಸುವ ಮುನ್ನವೇ ಕೆಲವು ನಿಮಿಷಗಳವರೆಗೆ ಮೆರವಣಿಗೆ ನಡೆಸುತ್ತಿದ್ದಾರೆ. ಕೆಲವರು ಮೋಟಾರ್ ಬೈಕ್‌ಗಳಲ್ಲಿ ರ‍್ಯಾಲಿ ನಡೆಸುತ್ತಾ ತಮ್ಮ ಹೋರಾಟ ಮುಂದುವರಿಸಿದ್ದಾರೆ.

ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಜಲಫಿರಂಗಿಗಳು, ಆಶ್ರವಾಯು ಮತ್ತು ರಬ್ಬರ್ ಗುಂಡುಗಳನ್ನು ಬಳಸುತ್ತಿದ್ದಾರೆ. ಈ ಹಿಂಸಾಚಾರದಿಂದ ಇಲ್ಲಿವರೆಗೆ 60 ಕ್ಕೂ ಹೆಚ್ಚು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಇಷ್ಟಾದರೂ ಫೆಬ್ರವರಿ 1ರಿಂದ ಆರಂಭವಾಗಿರುವ ಮಿಲಿಟರಿ ದಂಗೆಯ ವಿರುದ್ಧದ ಪ್ರತಿಭಟನೆಗಳನ್ನು ತಡೆಯಲು ಭದ್ರತಾ ಪಡೆಗಳು ವಿಫಲವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.