ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂರಕ್ಕೂ ಹೆಚ್ಚು ಜನರ ಬಂಧನ

Last Updated 9 ಏಪ್ರಿಲ್ 2019, 18:00 IST
ಅಕ್ಷರ ಗಾತ್ರ

ಟರ್ಕಿ: ಸರ್ಕಾರದ ವಿರುದ್ಧ 2016ರಲ್ಲಿ ನಡೆದ ಕ್ಷಿಪ್ರಕ್ರಾಂತಿಗೆ ಕಾರಣವಾದ ಗುಂಪಿನೊಂದಿಗೆ ಗುರುತಿಸಿಕೊಂಡಿರುವ ನೂರಕ್ಕೂ ಹೆಚ್ಚು ಜನರನ್ನು ಟರ್ಕಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಇಲ್ಲಿನ ಸರ್ಕಾರಿ ಮಾಧ್ಯಮ ವರದಿ ಮಾಡಿವೆ.

ಈ ಕ್ರಾಂತಿಯ ಹಿಂದೆ ಅಮೆರಿಕದಲ್ಲಿ ನೆಲೆಸಿರುವ ಮುಸ್ಲಿಂ ಧರ್ಮಗುರು ಫೆತುಲ್ಲಾ ಗುಲೆನ್ ಅವರ ಕೈವಾಡವಿದೆ ಎಂದು ಆರೋಪಿಸಲಾಗಿತ್ತು. ಕ್ಷಿಪ್ರಕ್ರಾಂತಿ ವಿಫಲವಾಯಿತು. ಆದಾಗ್ಯೂ ಗುಲೆನ್‌ ಅವರೊಂದಿಗೆ ಸಂಬಂಧ ಹೊಂದಿರುವ ಆರೋಪದ ಮೇಲೆ ಟರ್ಕಿ ಪೊಲೀಸರು ಇದುವರೆಗೆ 10,000 ಜನರನ್ನು ವಶಕ್ಕೆ ಪಡೆದಿದ್ದಾರೆ. 1.4 ಲಕ್ಷ ಸಾರ್ವಜನಿಕ ಉದ್ಯೋಗಿಗಳನ್ನು ಅಮಾನತು ಮಾಡಲಾಗಿದೆ.

ರಾಜಧಾನಿ ಅಂಕಾರ ಸೇರಿದಂತೆ ವಿವಿಧ ನಗರಗಳಲ್ಲಿ 400 ಬಂಧನ ವಾರೆಂಟ್‌ಗಳನ್ನು ಹೊರಡಿಸಲಾಗಿದೆ. 127 ಮಂದಿ ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮಾಜಿ ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಗುಲೆನ್‌ ಬೆಂಬಲಿಗರು ರಹಸ್ಯ ತಂತ್ರಾಂಶವನ್ನು ಸಂದೇಶ ರವಾನೆಗೆ ಬಳಸಿದ್ದಾರೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಪಾಶ್ಚ್ಯಾತ್ಯ ರಾಷ್ಟ್ರಗಳು ಮತ್ತು ಸಾಮಾಜಿಕ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಪೊಲೀಸರು ನೂರಾರು ಜನರನ್ನು ವಶಕ್ಕೆ ಪಡೆಯುತ್ತಿದ್ದಾರೆ.ರಾಜ್ಯದ ಮೇಲೆ ಗುಲೆನ್‌ ಪ್ರಭಾವವನ್ನು ತಗ್ಗಿಸಲು ಈ ಕ್ರಮಗಳು ಅನಿವಾರ್ಯ ಎಂದು ಅವರು ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT