ಬಂಗಬಂಧು ಮೆಮೋರಿಯಲ್ ಮ್ಯೂಸಿಯಂ ಸೇರಿದಂತೆ ಢಾಕಾದ ವಿವಿಧ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನಾಕಾರರು ಸೋಮವಾರ ಮಧ್ಯಾಹ್ನ ಬೆಂಕಿ ಹಚ್ಚಿದರು ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.
ಈ ಮ್ಯೂಸಿಯಂ ಅನ್ನು 1975ರಲ್ಲಿ ರಾಷ್ಟ್ರಪತಿಯಾಗಿದ್ದಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರಿಗೆ ಸಮರ್ಪಿಸಲಾಗಿದೆ.
2010ರ ಮಾರ್ಚ್‌ನಲ್ಲಿ ಇಂದಿರಾ ಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರಗಳನ್ನು ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ದ್ವಿಪಕ್ಷೀಯ ಸಾಂಸ್ಕೃತಿಕ ಸಂಪರ್ಕವನ್ನು ಈ ಕೇಂದ್ರವು ಉತ್ತೇಜಿಸುತ್ತದೆ.