ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಯಲ್ಲಿ ಗೆಲುವು: ಮೋದಿ–ಪುಟಿನ್‌ ಪರಸ್ಪರ ಹಾರೈಕೆ

Published 15 ಜನವರಿ 2024, 16:24 IST
Last Updated 15 ಜನವರಿ 2024, 16:24 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ದೂರವಾಣಿ ಕರೆ ಮಾಡಿ, ಉಕ್ರೇನ್‌ ಬಿಕ್ಕಟ್ಟು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ ಎಂದು ಅಧ್ಯಕ್ಷರ ನಿವಾಸ ಕ್ರೆಮ್ಲಿನ್‌ ಪ್ರಕಟಣೆ ತಿಳಿಸಿದೆ.

‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸಲಿ ಎಂಬುದಾಗಿ ಪುಟಿನ್‌ ಆಶಿಸಿದರು. ಅದೇ ರೀತಿ ಅಧ್ಯಕ್ಷೀಯ ಚುನಾವಣೆಯಲ್ಲಿ ಪುಟಿನ್‌ ಅವರಿಗೆ ಗೆಲುವಾಗಲಿ ಎಂದು ಮೋದಿ ಹಾರೈಸಿದರು’ ಎಂದೂ ಪ್ರಕಟಣೆ ತಿಳಿಸಿದೆ. 

‘ಉಭಯ ದೇಶಗಳಿಗೆ ಲಾಭದಾಯಕವಾಗುವಂತೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸಬೇಕು’ ಎಂಬ ಬಗ್ಗೆ ಮಾತುಕತೆ ನಡೆಸಿದರು. ಉಕ್ರೇನ್‌ನೊಂದಿಗೆ ನಡೆಯುತ್ತಿರುವ ಯುದ್ಧ ಕೂಡ, ಉಭಯ ನಾಯಕರ  ನಡುವಿನ ಚರ್ಚೆ ಸಂದರ್ಭದಲ್ಲಿ ಪ್ರಸ್ತಾಪವಾಯಿತು’ ಎಂದು ಕ್ರೆಮ್ಲಿನ್‌ ಜಾಲತಾಣದಲ್ಲಿ ಹೇಳಲಾಗಿದೆ.

ನರೇಂದ್ರ ಮೋದಿ
ನರೇಂದ್ರ ಮೋದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT