ಮಾಸ್ಕೊ/ವಾಷಿಂಗ್ಟನ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ದೂರವಾಣಿ ಮೂಲಕ ಸುಮಾರು 90 ನಿಮಿಷಗಳ ಕಾಲ ಸುದೀರ್ಘ ಮಾತುಕತೆ ನಡೆಸಿದ್ದಾರೆ.

ಇರಾನ್ ಬಿಕ್ಕಟ್ಟು ಮತ್ತು ಉಕ್ರೇನ್ ಪರಿಸ್ಥಿತಿ ಕುರಿತು ಉಭಯ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ರಷ್ಯಾದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ಮತ್ತೆ ದಾಳಿಗೆ ಮುಂದಾದರೆ ಅಂತರರಾಷ್ಟ್ರೀಯ ಸಮುದಾಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದು ಪುಟಿನ್ ಅವರು ಟ್ರಂಪ್ಗೆ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಜೊತೆಗಿನ ಕದನ ವಿರಾಮ ವಿಸ್ತರಿಸುವ ಡೊನಾಲ್ಡ್ ಟ್ರಂಪ್ ನಿರ್ಧಾರವನ್ನು ವ್ಲಾದಿಮಿರ್ ಪುಟಿನ್ ಶ್ಲಾಘಿಸಿದ್ದಾರೆ. ಈ ನಿರ್ಧಾರ ರಾಜತಾಂತ್ರಿಕ ಮಾತುಕತೆಗಳಿಗೆ ಹೆಚ್ಚಿನ ಅವಕಾಶ ನೀಡುತ್ತದೆ ಮತ್ತು ಈ ಭಾಗದಲ್ಲಿ ಶಾಂತಿ ಸ್ಥಾಪಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದಾಗ್ಯೂ, ಒಂದು ವೇಳೆ ಅಮೆರಿಕ ಅಥವಾ ಇಸ್ರೇಲ್ ಮತ್ತೊಮ್ಮೆ ಮಿಲಿಟರಿ ದಾಳಿಗೆ ಮುಂದಾದರೆ, ಅದರ ಪರಿಣಾಮ ಇರಾನ್ ಮತ್ತು ಅದರ ನೆರೆಹೊರೆಯ ರಾಷ್ಟ್ರಗಳಿಗೆ ಮಾತ್ರವಲ್ಲದೆ ಇಡೀ ಅಂತರರಾಷ್ಟ್ರೀಯ ಸಮುದಾಯಕ್ಕೆ ಆರ್ಥಿಕ ಹೊಡೆತದ ಬಿಸಿ ತಟ್ಟಲಿದೆ ಎಂದು ಪುಟಿನ್ ಆತಂಕ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ರಷ್ಯಾ ಎಲ್ಲಾ ರೀತಿಯ ರಾಜತಾಂತ್ರಿಕ ನೆರವು ನೀಡಲು ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಐದನೇ ವರ್ಷಕ್ಕೆ ಕಾಲಿಟ್ಟಿರುವ ರಷ್ಯಾ–ಉಕ್ರೇನ್ ಯುದ್ಧದ ಬಗ್ಗೆಯೂ ಉಭಯ ನಾಯಕರು ಚರ್ಚೆ ನಡೆಸಿದರು ಎನ್ನಲಾಗಿದೆ.

ಮೇ 9ರಂದು ರಷ್ಯಾ ಆಚರಿಸುವ ವಿಜಯ ದಿನದ (ಎರಡನೇ ಮಹಾಯುದ್ಧ) ಸಂದರ್ಭದಲ್ಲಿ ಉಕ್ರೇನ್ ವಿರುದ್ಧ ತಾತ್ಕಾಲಿಕ ಕದನ ವಿರಾಮ ಘೋಷಿಸಲು ಸಿದ್ಧರಿರುವುದಾಗಿ ಪುಟಿನ್ ಹೇಳಿದ್ದಾರೆ. ಈ ಪ್ರಸ್ತಾವನೆಯನ್ನು ಟ್ರಂಪ್ ಬೆಂಬಲಿಸಿದ್ದು ಇದು ವಿಜಯದ ಸಂಕೇತ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.