ಟೆಕ್ಸಾಸ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಇಂದು (ಭಾನುವಾರ) ಟೆಕ್ಸಾಸ್‌ನ ಡಲ್ಲಾಸ್‌ಗೆ ಆಗಮಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸೇರಿದಂತೆ ಇಂಡಿಯನ್ ಡಯಾಸ್ಪೊರಾ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ‘ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿಟ್ಟಿನಲ್ಲಿ ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇನೆ’ ಎಂದು ಹೇಳಿದ್ದಾರೆ.
‘ಅಮೆರಿಕದ ಡಲ್ಲಾಸ್‌ನಲ್ಲಿ ಭಾರತೀಯ ಡಯಾಸ್ಪೊರಾ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಸದಸ್ಯರಿಂದ ನನಗೆ ದೊರೆತ ಆತ್ಮೀಯ ಸ್ವಾಗತದಿಂದ ನಾನು ನಿಜವಾಗಿಯೂ ಸಂತಸಗೊಂಡಿದ್ದೇನೆ’ ಎಂದು ರಾಹುಲ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ವಾಷಿಂಗ್ಟನ್, ಡಲ್ಲಾಸ್ ನಗರಗಳಲ್ಲಿ, ಜಾರ್ಜ್‌ಟೌನ್ ಮತ್ತು ಟೆಕ್ಸಾಸ್ ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.