ಕೊಲಂಬೊ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಗೆ ನಮಲ್ ರಾಜಪಕ್ಸ ಅವರನ್ನು ತನ್ನ ಅಭ್ಯರ್ಥಿಯಾಗಿ ಆಡಳಿತಾರೂಢ ಶ್ರೀಲಂಕಾ ಪೀಪಲ್ಸ್ ಫ್ರಂಟ್ (ಎಸ್‌ಎಲ್‌ಪಿಪಿ) ಪಕ್ಷ ಬಧವಾರ ಘೋಷಿಸಿದೆ.
ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಎಸ್‌ಎಲ್‌ಪಿಪಿ ಪ್ರಧಾನ ಕಾರ್ಯದರ್ಶಿ ಸಾಗರ ಕರಿಯವಸಮ್ ಅವರು ಈ ಘೋಷಣೆ ಮಾಡಿದರು.
ಇದರೊಂದಿಗೆ, ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರಿಗೆ ತನ್ನ ಬೆಂಬಲ ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ರಾಜಪಕ್ಸ ರಾಜಮನೆತನ ರವಾನಿಸಿದೆ.
ಹಾಲಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಹಾಗೂ ಜೆವಿಪಿ ನಾಯಕ ಅನುರಕುಮಾರ ಡಿಸ್ಸನಾಯಕೆ ಅವರು ಸ್ಪರ್ಧಿಸುವುದು ಖಚಿತವಾಗಿದೆ. ಹೀಗಾಗಿ, ಈ ಬಾರಿಯ ಅಧ್ಯಕ್ಷೀಯ ಚುನಾವಣೆಯಲ್ಲಿ ಚತುಷ್ಕೋನ ಸ್ಪರ್ಧೆ ಸಾಧ್ಯತೆ ಇದೆ.