ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ರಾನಿಲ್ ವಿಕ್ರಮಸಿಂಘೆ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆ ಹಿನ್ನೆಲೆಯಲ್ಲಿ ಹೊಸ ಸಚಿವ ಸಂಪುಟ ರಚನೆಗೆ ವಿಕ್ರಮಸಿಂಘೆ ಮುಂದಾಗಿದ್ದು, ದೇಶದಾದ್ಯಂತ ವಿಧಿಸಲಾಗಿದ್ದ ಕರ್ಫ್ಯೂ ಅನ್ನು ತೆರವುಗೊಳಿಸಲಾಗಿದೆ.

ಶನಿವಾರ (12 ಗಂಟೆಗಳ ಕಾಲ) ರಾಷ್ಟ್ರವ್ಯಾಪಿ ಕರ್ಫ್ಯೂ ಅನ್ನು ತೆರವುಗೊಳಿಸಿ ಅಲ್ಲಿನ ನೂತನ ಸರ್ಕಾರ ಆದೇಶ ಹೊರಡಿಸಿದೆ.

ಶ್ರೀಲಂಕಾದ ಪ್ರಧಾನಿಯಾಗಿದ್ದ ಮಹಿಂದಾ ರಾಜಪಕ್ಸ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಾಲ್ಕೇ ದಿನಗಳಲ್ಲಿ, ವಿರೋಧ ಪಕ್ಷದ ನಾಯಕ ರಾನಿಲ್ ವಿಕ್ರಮಸಿಂಘೆ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇತ್ತೀಚಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ, ಮಹಿಂದಾ ರಾಜಪಕ್ಸ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಓದಿ...

ರಿಯಾಲಿಟಿ ಶೋ ಕೊರಿಯೊಗ್ರಾಫರ್ ಟೀನಾ ಸಿಧು ಅನುಮಾನಾಸ್ಪದ ಸಾವು

ಆಲಿಯಾ -ರಣಬೀರ್ ಮದುವೆಗೆ 1 ತಿಂಗಳು: ಹೊಸ ಫೋಟೊ ಹಂಚಿಕೊಂಡ ಬಾಲಿವುಡ್ ಬೆಡಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.