ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗೋ ನಿರಾಶ್ರಿತರ ಶಿಬಿರದ ಮೇಲೆ ಬಂಡುಕೋರರ ದಾಳಿ: ಮಹಿಳೆ, ಮಕ್ಕಳು ಸೇರಿ 46 ಮಂದಿ ಸಾವು

Published 13 ಜೂನ್ 2023, 4:55 IST
Last Updated 13 ಜೂನ್ 2023, 4:55 IST
ಅಕ್ಷರ ಗಾತ್ರ

ಕಿನ್ಶಾಸಾ: ಪೂರ್ವ ಕಾಂಗೋದ ನಿರಾಶಿತರ ಶಿಬಿರದ ಮೇಲೆ ಬಂಡುಕೋರರು ದಾಳಿ ನಡೆಸಿದ್ದು, 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಕಾಂಗೋದಲ್ಲಿ ಸಕ್ರಿಯವಾಗಿರುವ ಬಂಡುಕೋರ ಪಡೆಗಳೊಂದಿಗೆ ಸಂಪರ್ಕ ಹೊಂದಿರುವ ಕಾಂಗೋ ಅಭಿವೃದ್ಧಿಯ ಸಹಕಾರ (CODECO) ಸಂಘಟನೆ ಈ ದಾಳಿ ನಡೆಸಿದೆ. ಇಟುರಿ ಪ್ರಾಂತ್ಯದ ಜುಗು ಜಿಲ್ಲೆಯ ಲಾಲಾ ಎಂಬಲ್ಲಿ ನಿರಾಶಿತರ ಶಿಬಿರದ ಮೇಲೆ ದಾಳಿ ನಡೆಸಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಸೋಮವಾರ ಮಾಹಿತಿ ನೀಡಿದ್ದಾರೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹೆಚ್ಚಿನ ಜನರು ಮಲಗಿದ್ದಾಗಲೇ ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಕ್ಸಿನ್ಹುವಾ ವರದಿಯಲ್ಲಿ ಉಲ್ಲೇಖಿಸಿದೆ.

ಬಂಡುಕೋರರನ್ನು ಹಿಮ್ಮೆಟ್ಟಿಸಲು ದೇಶದ ಸೇನೆಯನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ

ಹಲವಾರು ವರ್ಷಗಳಿಂದ ಲಟ್ರಿ ಪ್ರಾಂತ್ಯದಲ್ಲಿ ಸಕ್ರಿಯವಾಗಿರುವ ಬಂಡುಕೋರ ಸಂಘಟನೆಯು ನಾಗರಿಕರನ್ನು ಕೊಂದ ಆರೋಪವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT