ಢಾಕಾ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ರಸ್ತೆ ಬದಿಯ ಹಳ್ಕಕ್ಕೆ ಬಿದ್ದು 17 ಜನ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನೈರುತ್ಯ ಬಾಂಗ್ಲಾದೇಶದಲ್ಲಿ ಶನಿವಾರ ನಡೆದಿದೆ.
60 ಜನರಿದ್ದ ಬಸ್, ಝಲಕಥಿ ಜಿಲ್ಲೆಯ ಬಳಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಮಳೆಯಿಂದಾಗಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಿದೆ. ಈಗಾಗಲೇ 17 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ 20 ಪ್ರಯಾಣಿಕರಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ವರದಿಗಾರರಿಗೆ ತಿಳಿಸಿದ್ದಾರೆ.
ಸಾವನ್ನಪ್ಪಿದವರಲ್ಲಿ 8 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.