ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ರಷ್ಯಾ–ಉಕ್ರೇನ್ ಯುದ್ಧ ಹಾಗೂ ಇರಾನ್ನ ಪರಿಸ್ಥಿತಿ ಕುರಿತಂತೆ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಟಾಮಿ ಪಿಗೋಟ್ ಹೇಳಿದ್ದಾರೆ.

ರಷ್ಯಾ ವಿದೇಶಾಂಗ ಸಚಿವರ ಮನವಿ ಮೇರೆಗೆ ಮಾತುಕತೆ ನಡೆಸಿದ್ದು, ಈ ವೇಳೆ ಅಮೆರಿಕ–ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧ ಹಾಗೂ ಜಾಗತಿಕ ಸಂಘರ್ಷಗಳ ಕುರಿತು ಮಾತುಕತೆ ನಡೆಸಲಾಗಿದೆ. ಉಭಯ ದೇಶಗಳು ಕೂಡ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಉಕ್ರೇನ್ನ ಕೀವ್ ಮೇಲಿನ ದಾಳಿಯನ್ನು ನಾವು ಸಮರ್ಥಿಸಿಕೊಂಡಿದ್ದೇವೆ. ಅಲ್ಲಿರುವ ರಾಜತಾಂತ್ರಿಕರು ಮತ್ತು ನಾಗರಿಕರನ್ನು ಮರಳಿ ಕರೆಸಿಕೊಳ್ಳುವಂತೆ ಅಮೆರಿಕಕ್ಕೆ ಮನವಿ ಮಾಡಿದ್ದೇವೆ ಎಂದು ಸೆರ್ಗೆ ಲಾವ್ರೊವ್ ಹೇಳಿದ್ದಾರೆ.

ರಷ್ಯಾ ನಾಗರಿಕ ಪ್ರದೇಶಗಳ ಮೇಲೆ ಉಕ್ರೇನ್ ನಡೆಸುತ್ತಿರುವ ನಿರಂತರ ಭಯೋತ್ಪಾದಕ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ನಾವು ಕೀವ್ ಮೇಲೆ ಪ್ರತಿದಾಳಿ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಕದನವಿರಾಮ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಅಮೆರಿಕ, ಇರಾನ್ ಮೇಲೆ ಮತ್ತೆ ದಾಳಿ ಮಾಡಿದೆ. ರಷ್ಯಾ–ಉಕ್ರೇನ್ ಸಂಘರ್ಷ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.