ವಾಷಿಂಗ್ಟನ್: ಉಕ್ರೇನ್ ವಿರುದ್ಧದ ಯುದ್ಧಕ್ಕೆ ಸೇನೆ ಮತ್ತು ಆರ್ಥಿಕ ನೆರವು ನೀಡುವಂತೆ ಚೀನಾವನ್ನು ರಷ್ಯಾ ಕೋರಿದೆ ಎಂದು ಅಮೆರಿಕದ ಮಾಧ್ಯಮ ವರದಿ ಮಾಡಿದೆ.

ನಿರ್ಬಂಧಗಳಿಂದ ರಷ್ಯಾ ನುಣಿಚಿಕೊಳ್ಳಲು ಸಹಕಾರ ನೀಡಿದರೆ ತೀಕ್ಷ್ಣ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಚೀನಾಗೆ ಅಮೆರಿಕ ಭಾನುವಾರ ಎಚ್ಚರಿಕೆ ನೀಡಿತ್ತು. ಇದಾದ ಕೆಲವೇ ಕ್ಷಣಗಳಲ್ಲಿ ವರದಿ ಪ್ರಕಟವಾಗಿದೆ.

ರಷ್ಯಾಗೆ ಸಹಕಾರ ನೀಡಿದರೆ ತೀಕ್ಷ್ಣ ಪರಿಣಾಮ: ಚೀನಾಗೆ ಅಮೆರಿಕ ಎಚ್ಚರಿಕೆ

ಸೇನಾ ಸಲಕರಣೆಗಳನ್ನು ಒದಗಿಸುವಂತೆ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳ ನಿರ್ಬಂಧಗಳಿಂದಾಗಿ ಎದುರಾಗಿರುವ ಸಮಸ್ಯೆಯಿಂದ ಪಾರಾಗಲು ಆರ್ಥಿಕ ನೆರವು ನೀಡುವಂತೆ ಚೀನಾವನ್ನು ರಷ್ಯಾ ಕೋರಿದೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿರುವುದಾಗಿ ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

ರಷ್ಯಾವು ನಿರ್ದಿಷ್ಟವಾಗಿ ಯಾವುದಕ್ಕೆ ಬೇಡಿಕೆ ಇಟ್ಟಿದೆ, ಚೀನಾ ಅದಕ್ಕೆ ಪ್ರತಿಕ್ರಿಯೆ ನೀಡಿದೆಯೇ ಎಂಬ ಕುರಿತು ಹೆಚ್ಚಿನ ಮಾಹಿತಿ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ಉಕ್ರೇನ್ ಸೇನಾ ನೆಲೆಯ ಮೇಲೆ ರಷ್ಯಾದ ವೈಮಾನಿಕ ದಾಳಿ: 51ಕ್ಕೂ ಹೆಚ್ಚು ಮಂದಿ ಸಾವು

ಈ ವಿಚಾರವಾಗಿ ನಮಗೇನೂ ಮಾಹಿತಿ ಇಲ್ಲ ಎಂದು ವಾಷಿಂಗ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ವಕ್ತಾರರು ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.