ಮಾಸ್ಕೊ: ರಷ್ಯಾದಲ್ಲಿ ಸಾರ್ವಜನಿಕ ಬಳಕೆಗೆ ಬಿಡುಗಡೆ ಮಾಡಲು ಅನುಮೋದಿಸಿರುವ ಕೋವಿಡ್–19 ಲಸಿಕೆಯ ಉತ್ಪಾದನೆ ಆರಂಭವಾಗಿದೆ ಎಂದು ಸ್ತಳೀಯ ಮಾಧ್ಯಮಗಳು ವರದಿ ಮಾಡಿವೆ.

ದೇಶಿಯಾ ಔಷಧಿ ಉತ್ಪಾದಕ ಘಟಕಗಳಲ್ಲಿ ಲಸಿಕೆಯ ಉತ್ಪಾದನೆಗೆ ಚಾಲನೆ ನೀಡಲಾಗಿದೆ ಎಂದು ಇಲ್ಲಿನ ಇಂಟರ್ ಫ್ಯಾಕ್ಸ್ ಸುದ್ದಿ ಸಂಸ್ಥೆ ಶನಿವಾರ ವರದಿ ಮಾಡಿದೆ.

ಆಗಸ್ಟ್ ತಿಂಗಳ ಅಂತ್ಯದ ವೇಳಗೆ ಈ ಲಸಿಕೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ರಷ್ಯಾ ಆರೋಗ್ಯ ಇಲಾಖೆಯ ಮಾಹಿತಿಯನ್ನು ಉಲ್ಲೇಖಿಸಿ ಇಂಟರ್ ಫ್ಯಾಕ್ಸ್ ಸುದ್ದಿ ಹೇಳಿದೆ.

ರಷ್ಯಾ ಅನುಮೋದಿಸಿರುವ ಕೋವಿಡ್–19 ಲಸಿಕೆಗೆ 'ಸ್ಪುಟ್ನಿಕ್ V' ಎಂದು ಹೆಸರು ನೀಡಲಾಗಿದೆ. ಬಳಕೆಗೆ ಬರಲಿರುವ ಜಗತ್ತಿನ ಮೊದಲ ಕೋವಿಡ್–19 ಲಸಿಕೆ ಇದಾಗಿದ್ದು, 'ಜಗತ್ತಿಗೆ ಇದೊಂದು ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ' ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ಮಾಸ್ಕೊದ ಗಮೆಲಿಯಾ ಇನ್‌ಸ್ಟಿಟ್ಯೂಟ್ ಮತ್ತು ರಷ್ಯಾ ರಕ್ಷಣಾ ಸಚಿವಾಲಯದ ಜಂಟಿ ಕಾರ್ಯಾಚರಣೆಯಲ್ಲಿ ಕೋವಿಡ್ ಲಸಿಕೆ ಅಭಿವೃದ್ದಿ ಪಡಿಸಲಾಗಿದೆ. ಕ್ಲಿನಿಕಲ್ ಟ್ರಯಲ್ ಪೂರ್ಣಗೊಳಿಸದೆಯೇ ಸಾರ್ವಜನಿಕ ಬಳಕೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿರುವುದು ಸುರಕ್ಷತೆಯ ಬಗ್ಗೆ ಅನುಮಾನಗಳಿಗೆ ಕಾರಣವಾಗಿದೆ. ಲಸಿಕೆ ಬಿಡುಗಡೆಗೆ ಆತುರ ವ್ಯಕ್ತ ಪಡಿಸುತ್ತಿರುವ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಕಳೆದ ವಾರ ಎಚ್ಚರಿಕೆ ನೀಡಿತ್ತು. ಅಮೆರಿಕದ ಆರೋಗ್ಯ ತಜ್ಞ ಆಂಥೊನಿ ಫೌಸಿ ಸಹ ರಷ್ಯಾ ಮತ್ತು ಚೀನಾ ಲಸಿಕೆಗಳ ಸುರಕ್ಷತೆ ಹಾಗೂ ಪರಿಣಾಮಗಳ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದರು.

ಪುಟಿನ್ ಅವರ ಪುತ್ರಿಯರಲ್ಲಿ ಒಬ್ಬಳಿಗೆ ಲಸಿಕೆ ನೀಡಲಾಗಿದೆ ಹಾಗೂ ಅವಳ ಆರೋಗ್ಯ ಉತ್ತಮವಾಗಿದೆ. ಕೊರೊನಾ ವೈರಸ್ ಸೋಂಕಿಗೆ ಲಸಿಕೆ ಪರಿಣಾಮಕಾರಿಯಾಗಿದೆ ಹಾಗೂ ಪ್ರತಿಕಾಯ ಉತ್ಪಾದಿಸುತ್ತಿದೆ ಎಂದು ಪುಟಿನ್ ಹೇಳಿದ್ದಾರೆ.

'ಸ್ಪಟ್ನಿಕ್ V' ಲಸಿಕೆ

ಸಾರ್ಸ್–ಕೋವ್–2 ಅಡೆನೊವೈರಸ್‌ನ ಡಿಎನ್‌ಎ ಆಧಾರಿತ ಲಸಿಕೆಯನ್ನು ರಷ್ಯಾ ಅಭಿವೃದ್ಧಿ ಪಡಿಸಿದೆ. ಇದು ಸೋಂಕಿನ ವಿರುದ್ಧ ರೋಗ ನಿರೋಧಕ ಶಕ್ತಿ ಉತ್ಪಾದನೆಗೆ ಪ್ರಚೋದಿಸುತ್ತದೆ. ಲಸಿಕೆ ದೇಹಕ್ಕೆ ಯಾವುದೇ ಹಾನಿ ಉಂಟು ಮಾಡುವುದಿಲ್ಲ ಎಂದು ಗಲೆಮಿಯಾ ರಾಷ್ಟ್ರೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಅಲೆಗ್ಸಾಂಡರ್ ಗಿಂಟ್ಸ್‌ಬರ್ಗ್ ಭರವಸೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.