ಕೀವ್ : ರಷ್ಯಾ ಪಡೆಗಳು 500ಕ್ಕೂ ಹೆಚ್ಚು ಡ್ರೋನ್ಗಳನ್ನು ಬಳಸಿ ಮಂಗಳವಾರ ರಾತ್ರಿ ಉಕ್ರೇನ್ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಯೂರೋಪಿನ ಮುಖಂಡರು ಉಕ್ರೇನ್ನ ಸೇನಾ ಬಲ ಹೆಚ್ಚಿಸುವುದು ಮತ್ತು ಕದನ ವಿರಾಮದಲ್ಲಿ ಅಮೆರಿಕದ ಮಧ್ಯಸ್ಥಿಕೆ ಕುರಿತು ಚರ್ಚೆ ನಡೆಸಿದ ಬೆನ್ನಲ್ಲೇ ರಷ್ಯಾ ದಾಳಿ ನಡೆಸಿದೆ.

‘ರಷ್ಯಾ, ‘ಪ್ರದರ್ಶನಾತ್ಮಕ ರಾತ್ರಿ ದಾಳಿ’ ಮೂಲಕ ದೇಶದ ಮೂಲಸೌಕರ್ಯ ಮತ್ತು ಇಂಧನ ಸೌಲಭ್ಯಗಳನ್ನು ನಾಶಪಡಿಸುತ್ತಿದೆ’ ಎಂದು ಝೆಲೆನ್ಸ್ಕಿ ಆರೋಪಿಸಿದ್ದಾರೆ. ಮಂಗಳವಾರ ರಾತ್ರಿ ನಡೆದ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಸೇನೆ ಹೇಳಿದೆ.

ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ರಷ್ಯಾ ಅಧ್ಯಕ್ಷರೊಂದಿಗೆ ನೇರ ಮಾತುಕತೆ ನಡೆಸುವ ಅಮೆರಿಕದ ಪ್ರಸ್ತಾವಕ್ಕೆ ಝೆಲೆನ್ಸ್ಕಿ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ರಷ್ಯಾದ ಆಡಳಿತದ ಕಚೇರಿ ಕ್ರೆಮ್ಲಿನ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.