ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಷ್ಯಾದಿಂದ ಉಕ್ರೇನ್‌ ಮೇಲೆ 100 ಕ್ಷಿಪಣಿ ದಾಳಿ

Last Updated 16 ನವೆಂಬರ್ 2022, 2:00 IST
ಅಕ್ಷರ ಗಾತ್ರ

ಕೀವ್‌: ರಷ್ಯಾ ಸೇನಾ ಪಡೆ ಮಂಗಳವಾರ ಮತ್ತೆ ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು100 ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಉಕ್ರೇನ್‌ ಹೇಳಿದೆ.

‘ಸುಮಾರು 100 ಕ್ಷಿಪಣಿಗಳನ್ನು ಈಗಾಗಲೇ ಉಡಾವಣೆ ಮಾಡಲಾಗಿದೆ. ವಿದ್ಯುತ್‌ ವ್ಯತ್ಯಯಗೊಂಡಿದ್ದು, ದೇಶದಾದ್ಯಂತ ಸಾಕಷ್ಟು ಹಾನಿಯಾಗಿದೆ’ ಎಂದು ವಾಯುಪಡೆಯ ವಕ್ತಾರ ಯೂರಿ ಇಗ್ನಾಟ್ ಉಕ್ರೇನ್‌ ದೂರದರ್ಶನಕ್ಕೆ ತಿಳಿಸಿದರು.

‘ಅತ್ಯಗತ್ಯ ಮೂಲಸೌಕರ್ಯ ಅವರ ಪ್ರಾಥಮಿಕ ಗುರಿ. ಕೆಲವು ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ. ಆದರೆ ಅದರ ಕುರಿತು ಸ್ಪಷ್ಟ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT