ಮಾಸ್ಕೊ: ‘ಶಸ್ತ್ರಾಸ್ತ್ರ ಪೂರೈಸುವಂತೆ ಇರಾನ್ ಮನವಿ ಮಾಡಿಲ್ಲ’ ಎಂದು ರಷ್ಯಾದ ಆಡಳಿತ ಕಚೇರಿ ಕ್ರೆಮ್ಲಿನ್ ಗುರುವಾರ ಸ್ಪಷ್ಟಪಡಿಸಿದೆ.

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ವೈಮಾನಿಕ ದಾಳಿಯನ್ನು ಖಂಡಿಸಿರುವ ರಷ್ಯಾ, ತಕ್ಷಣವೇ ಕದನ ವಿರಾಮ ಘೋಷಿಸುವಂತೆ ಒತ್ತಾಯಿಸಿದೆ.

ಬುಶೇರ್ನಲ್ಲಿ ಎರಡು ಪರಮಾಣು ಘಟಕ ನಿರ್ಮಾಣಕ್ಕೆ ರಷ್ಯಾ ಕಳೆದ ವರ್ಷ ಇರಾನ್ ಜತೆಗೆ 20 ವರ್ಷಗಳ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಬಳಸಲು ರಷ್ಯಾಕ್ಕೆ ಶಾಹಿದ್ ಡ್ರೋನ್ಗಳನ್ನು ಇರಾನ್ ಪೂರೈಸಿದೆ.

‘ಶಸ್ತ್ರಾಸ್ತ್ರ ಪೂರೈಸುವಂತೆ ಇರಾನ್ನಿಂದ ಇದುವರೆಗೆ ಯಾವುದೇ ಮನವಿ ಬಂದಿಲ್ಲ. ನಮ್ಮ ಸ್ಥಿರ ನಿಲುವು ಎಲ್ಲರಿಗೂ ತಿಳಿದಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಕ್ರೆಮ್ಲಿನ್ ವಕ್ತಾರ ದಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.