ವಾಷಿಂಗ್ಟನ್ (ಎಪಿ): ‘ಮೂರು ದಿನಗಳ ಕದನ ವಿರಾಮ ಹಾಗೂ ಕೈದಿಗಳ ವಿನಿಮಯಕ್ಕೆ ರಷ್ಯಾ ಹಾಗೂ ಉಕ್ರೇನ್ ಒಪ್ಪಿಗೆ ಸೂಚಿಸಿವೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

‘ಈಗಿನ ನಿರ್ಧಾರವು ದೀರ್ಘಕಾಲದಿಂದ ನಡೆಯುತ್ತಿರುವ ಯುದ್ಧದ ಅಂತ್ಯವಾಗಿರಬಹುದು’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರದಿಂದ ಸೋಮವಾರದತನಕ ಕದನ ವಿರಾಮ ಜಾರಿಯಲ್ಲಿರಲಿದೆ ಎಂದು ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

81 ವರ್ಷಗಳ ಹಿಂದೆ ಜರ್ಮನಿಯ ನಾಜಿಯ ವಿರುದ್ಧ ಜಯಗಳಿಸಿದ ದಿನವಾದ ಮೇ 9 ಅನ್ನು ರಷ್ಯಾವು ವಿಜಯ ದಿನವಾಗಿ ಆಚರಿಸುತ್ತದೆ. ಉಕ್ರೇನ್ ಕೂಡ ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿತ್ತು.

ಕದನ ವಿರಾಮದ ವೇಳೆ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ, ಉಭಯ ರಾಷ್ಟ್ರಗಳು ಸಾವಿರ ಕೈದಿಗಳನ್ನು ವಿನಿಮಯ ಮಾಡಿಕೊಳ್ಳಲು ಒಪ್ಪಿಗೆ ಸೂಚಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-4-989033555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.