ನವದೆಹಲಿ: ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಅಮೆರಿಕ ಹಾಗೂ ಯುರೋಪ್ ಮಿತ್ರರಾಷ್ಟ್ರಗಳ ತೀವ್ರ ವಿರೋಧವನ್ನು ಕಡೆಗಣಿಸಿ ರಷ್ಯಾ, ಗುರುವಾರ ಬೆಳಿಗ್ಗೆ ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಇದರಿಂದ ಯುದ್ಧಪೀಡಿತ ಉಕ್ರೇನ್‌ನಲ್ಲಿ ಅಪಾರ ನಾಶ-ನಷ್ಟ ಉಂಟಾಗಿದೆ.

ಇದನ್ನೂ ಓದಿ:ಉಕ್ರೇನ್‌ನಲ್ಲಿ ಸಿಲುಕಿರುವ ಹಾವೇರಿ ಜಿಲ್ಲೆಯ 9 ವಿದ್ಯಾರ್ಥಿಗಳು

ಈ ಮೊದಲು ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಿದ್ದ ಭಾರತೀಯ ವಿದೇಶಾಂಗ ಸಚಿವಾಲಯ, ತಟಸ್ಥ ಧೋರಣೆ ಹಾಗೂ ಶಾಂತಿ ಕಾಪಾಡುವಂತೆ ಕರೆ ನೀಡಿತ್ತು.

ರಷ್ಯಾದಿಂದ ದಾಳಿ ಭೀತಿಯ ನಡುವೆ ಭಾರತದ ಪ್ರಧಾನಿ ಮಧ್ಯ ಪ್ರವೇಶಿಸಿ ಪುಟಿನ್ ಜೊತೆ ಮಾತುಕತೆ ನಡೆಸುವಂತೆ ಉಕ್ರೇನ್ ರಾಯಭಾರಿ ಕಚೇರಿ ಒತ್ತಾಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.