ಕೀವ್: ರಷ್ಯಾ ವಿರುದ್ಧದ ಯುದ್ಧದ ಸಂದರ್ಭದಲ್ಲಿ ಉಕ್ರೇನ್ ಸೇನೆ ಬಳಸುತ್ತಿರುವ ಶೇ 60 ರಷ್ಟು ಶಸ್ತ್ರಾಸ್ತ್ರಗಳು ಸ್ವದೇಶಿ ನಿರ್ಮಿತವಾದವು ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೇಳಿದ್ದಾರೆ.

ಶನಿವಾರ ರಾತ್ರಿ ಪ್ರಕಟವಾಗಿರುವ ವಿಡಿಯೊ ಭಾಷಣದಲ್ಲಿ, 'ಶಸ್ತ್ರಾಸ್ತ್ರಗಳು ಅತ್ಯಂತ ಶಕ್ತಿಶಾಲಿಯಾಗಿದ್ದು, ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿವೆ' ಎಂದು ಹೇಳಿಕೊಂಡಿದ್ದಾರೆ.

ಡೆನ್ಮಾರ್ಕ್ನಲ್ಲಿ ಜಂಟಿಯಾಗಿ ಶಸ್ತ್ರಾಸ್ತ್ರ ಉತ್ಪಾದನೆ ಆರಂಭಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಝೆಲೆನ್ಸ್ಕಿ ಹಾಗೂ ಇತರ ಕೆಲವು ಹಿರಿಯ ಅಧಿಕಾರಿಗಳು, ಭವಿಷ್ಯದಲ್ಲಿ ಉಕ್ರೇನ್ಗೆ ರಕ್ಷಣೆಯನ್ನು ಖಾತ್ರಿಪಡಿಸುವ ಸಲುವಾಗಿ ದೇಶೀಯವಾಗಿ ಶಸ್ತ್ರಾಸ್ತ್ರಗಳ ತಯಾರಿಯನ್ನು ಗಣನೀಯವಾಗಿ ಹೆಚ್ಚಿಸುವುದಕ್ಕೆ ಹಿಂದಿನಿಂದಲೂ ಆದ್ಯತೆ ನೀಡುತ್ತಿದ್ದಾರೆ.

ರಷ್ಯಾದ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ವಾಯು ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಡ್ರೋನ್ ಉತ್ಪಾದನೆಗೆ ಉಕ್ರೇನ್ ಒತ್ತು ನೀಡುತ್ತಿದೆ.

ರಷ್ಯಾ ಸೇನೆ 2022ರ ಫೆಬ್ರುವರಿಯಲ್ಲಿ ಉಕ್ರೇನ್ ಮೇಲೆ ಆಕ್ರಮಣ ಆರಂಭಿಸಿತ್ತು. ಆಗಿನಿಂದ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.