ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ವಿಮಾನ ಪತನ: ಉಕ್ರೇನ್‌ನ 65 ಯುದ್ಧ ಕೈದಿಗಳು ಸಾವು– ರಕ್ಷಣಾ ಸಚಿವಾಲಯ

Published 25 ಜನವರಿ 2024, 3:29 IST
Last Updated 25 ಜನವರಿ 2024, 3:29 IST
ಅಕ್ಷರ ಗಾತ್ರ

ಮಾಸ್ಕೊ: ಉಕ್ರೇನ್‌ನ 65 ಯುದ್ಧ ಕೈದಿಗಳನ್ನು ಕರೆದೊಯ್ಯುತ್ತಿದ್ದ ರಷ್ಯಾಸ ಐಎಲ್‌–76 ಸೇನಾ ವಿಮಾನವು ರಷ್ಯಾ–ಉಕ್ರೇನ್‌ ಗಡಿ ಭಾಗದ ಬೆಲ್ಗಾರ್ಡ್‌ ಪ್ರಾಂತ್ಯದಲ್ಲಿ ಪತನಗೊಂಡಿದ್ದು ಎಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 

ಯುದ್ಧದಲ್ಲಿ ಸೆರೆಯಾದ ಉಕ್ರೇನ್‌ನ 65 ಸೈನಿಕರು ಈ ವಿಮಾನದಲ್ಲಿದ್ದರು. ಇವರೊಂದಿಗೆ 6 ವಿಮಾನ ಸಿಬ್ಬಂದಿ ಮತ್ತು 3 ರಕ್ಷಣಾ ಸಿಬ್ಬಂದಿ ಇದ್ದರು. ಕೈದಿಗಳ ಹಸ್ತಾಂತರ ಪ್ರಕ್ರಿಯೆಗಾಗಿ ಇವರನ್ನು ಬೆಲ್ಗಾರ್ಡ್‌ ಪ್ರಾಂತ್ಯದಲ್ಲಿನ ಉಭಯ ರಾಷ್ಟ್ರಗಳ ಗಡಿ ಪ್ರದೇಶಕ್ಕೆ ಕರೆತರಲಾಗುತ್ತಿತ್ತು’ ಎಂದು ಸೇನೆ ಹೇಳಿದೆ.

65 ಯುದ್ಧ ಕೈದಿಗಳು, ಸಿಬ್ಬಂದಿ ಸೇರಿ 74 ಜನರು ಮೃತಪಟ್ಟಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯವು ಗುರುವಾರ ಹೇಳಿದೆ.

ಘಟನೆ ಕುರಿತು ಉಕ್ರೇನ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. 

ಬೆಲ್ಗಾರ್ಡ್ ಪ್ರಾಂತ್ಯದಲ್ಲಿ ವಿಮಾನವೊಂದು ಪತನಗೊಂಡು ಬೆಂಕಿ ಹೊತ್ತಿಕೊಂಡಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದು ಹರಿದಾಡಿದೆ. ಈ ದುರಂತ ನಿನ್ನೆ  ಬೆಳಿಗ್ಗೆ 11ರ ಆಸುಪಾಸಿನಲ್ಲಿ ನಡೆದಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT