ಮಾಸ್ಕೊ: ಉಕ್ರೇನ್ ವಿಚಾರವಾಗಿ ಪಶ್ಚಿಮದ ರಾಷ್ಟ್ರಗಳ ಜತೆ ಮಾತುಕತೆ ನಡೆಸಲು ಸಿದ್ಧರಿದ್ದೇವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ನಾವು ಜತೆಯಾಗಿ ಕೆಲಸ ಮಾಡಲು ಬಯಸುತ್ತೇವೆ, ಉಕ್ರೇನ್ ವಿಚಾರವಾಗಿ ಚರ್ಚೆಗೆ ಸಿದ್ಧರಿದ್ದೇವೆ ಎಂದು ಜರ್ಮನಿ ಚಾನ್ಸಲರ್ ಒಲಾಫ್ ಶಾಝ್ ಜತೆ ಮಾತುಕತೆಯ ಬಳಿಕ ಪುಟಿನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಮಗೂ ಯುದ್ಧ ಬೇಕಾಗಿಲ್ಲ. ಆದರೆ ಭದ್ರತೆ ಮತ್ತು ಸುರಕ್ಷತೆ ವಿಚಾರವಾಗಿ ವಾಷಿಂಗ್ಟನ್ ಮತ್ತು ನ್ಯಾಟೊ ಕೈಗೊಳ್ಳುವ ನಿರ್ಧಾರಗಳನ್ನು ಕುರುಡಾಗಿ ಒಪ್ಪಲಾಗದು ಎಂದು ಪುಟಿನ್ ಹೇಳಿದ್ದಾರೆ.

ಉಕ್ರೇನ್ ವಿಚಾರವಾಗಿ ಅಮೆರಿಕ ಮತ್ತು ರಷ್ಯಾ ಮಧ್ಯೆ ಸಂಘರ್ಷ ಏರ್ಪಟ್ಟಿದೆ.

ಭಾರತೀಯ ರಾಯಭಾರ ಕಚೇರಿ ಕೂಡ ಮಂಗಳವಾರ ಉಕ್ರೇನ್‌ನಲ್ಲಿರುವ ಭಾರತೀಯರು ಕೂಡಲೇ ಅಲ್ಲಿಂದ ತೆರಳುವಂತೆ ಸೂಚನೆ ನೀಡಿತ್ತು.

ಉಕ್ರೇನ್: ರಷ್ಯಾಕ್ಕೆ ಮತ್ತೊಮ್ಮೆ ಎಚ್ಚರಿಕೆ ನೀಡಿದ ಅಮೆರಿಕ

ಜತೆಗೆ ಅಮೆರಿಕ ರಷ್ಯಾ ಪಡೆಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ಒತ್ತಡ ಹೇರುತ್ತಿದ್ದು, ಪದೇ ಪದೆ ಎಚ್ಚರಿಕೆ ನೀಡುತ್ತಿದೆ.

ಯುದ್ಧ ಭೀತಿ: ಉಕ್ರೇನ್ ತೊರೆಯಲು ಭಾರತೀಯರಿಗೆ ಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.