ನವದೆಹಲಿ: ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಭಾರತವು ಶಾಂತಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಆದ್ಯತೆ ನೀಡುತ್ತದೆ ಎಂದು ಹೇಳಿದರು.

ವಿರೋಧ ಪಕ್ಷಗಳ ಘೋಷಣೆಗಳ ನಡುವೆಯೇ ಮಾತನಾಡಿದ ಅವರು, ಆ ಪ್ರದೇಶದಲ್ಲಿರುವ ಭಾರತೀಯ ಸಮುದಾಯದವರ ರಕ್ಷಣೆಗೆ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

‘ಸಂಘರ್ಷ ಆರಂಭವಾದಾಗಿನಿಂದಲೂ ಅಲ್ಲಿನ ಪರಿಸ್ಥಿತಿಯನ್ನು ಸರ್ಕಾರವು ನಿರಂತರವಾಗಿ ಅವಲೋಕಿಸುತ್ತಿದೆ. ಅಲ್ಲಿನ ವಿದ್ಯಮಾನಗಳು ತೀವ್ರ ಕಳವಳಕ್ಕೆ ಕಾರಣವಾಗಿವೆ’ ಎಂದರು.

‘ಪಶ್ಚಿಮ ಏಷ್ಯಾದ ಬೆಳವಣಿಗೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಮಾತುಕತೆ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂಬುದು ನಮ್ಮ ಅಚಲ ನಂಬಿಕೆಯಾಗಿದೆ’ ಎಂದು ಹೇಳಿದರು.

ಮುಂದುವರಿದು, ಅಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ಪ್ರಸ್ತುತ ಸಮಯದಲ್ಲಿ ಇರಾನ್ ಆಡಳಿತದ ಜೊತೆ ಸಂಪರ್ಕ ಸಾಧಿಸುವುದು ಕಷ್ಟಕರವಾಗಿದೆ ಎಂದು ಹೇಳಿದ ಅವರು, ಇರಾನ್ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.