ಸಿಯೊಲ್ (ದಕ್ಷಿಣ ಕೊರಿಯಾ): ಮುಯಾನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು (ಭಾನುವಾರ) ಬೆಳಿಗ್ಗೆ ಇಳಿಯುತ್ತಿದ್ದ 'ಜೆಜು ಏರ್' ವಿಮಾನ ಅಪಘಾತಕ್ಕೀಡಾಗಿದ್ದು, ಮೃತರ ಸಂಖ್ಯೆ 174ಕ್ಕೆ ಏರಿಕೆಯಾಗಿದೆ.

ಲ್ಯಾಂಡ್ ಆಗುವ ವೇಳೆ ರನ್ವೇನಿಂದ ಜಾರಿದ ವಿಮಾನ, ವೇಗವಾಗಿ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಕ್ಷಣವೇ ಹೊತ್ತಿ ಉರಿದಿದೆ. ಬ್ಯಾಂಕಾಕ್ನಿಂದ ಬಂದ ಈ ವಿಮಾನದಲ್ಲಿ 175 ಪ್ರಯಾಣಿಕರು ಹಾಗೂ 6 ಮಂದಿ ಸಿಬ್ಬಂದಿಯಿದ್ದರು. ಈ ಪೈಕಿ ಇಬ್ಬರನ್ನು ರಕ್ಷಿಸಲಾಗಿದೆ.
.ದ.ಕೊರಿಯಾ ವಿಮಾನ ಅಪಘಾತದಲ್ಲಿ 120 ಸಾವು; ಹಕ್ಕಿ ಡಿಕ್ಕಿಯಾಗಿರಬಹುದು ಎಂದ ಅಧಿಕಾರಿ.
ಕ್ಷಮೆ ಯಾಚಿಸಿದ 'ಜೆಜು ಏರ್'

ದುರಂತದ ಬೆನ್ನಲ್ಲೇ ಜೆಜು ಏರ್ ಸಂಸ್ಥೆ ಕ್ಷಮೆ ಯಾಚಿಸಿದೆ, ಮುಯಾನ್ ವಿಮಾನ ದುರಂತದಲ್ಲಿ ಸಂಕಷ್ಟಕ್ಕೀಡಾದ ಪ್ರತಿಯೊಬ್ಬರಲ್ಲಿಯೂ ಕ್ಷಮೆ ಕೋರುತ್ತೇವೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ. ದುರ್ಘಟನೆಯ ಬಗ್ಗೆ ವಿಷಾದಿಸುತ್ತೇವೆ ಎಂದು ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.

ಸಂತ್ರಸ್ತರ ಕುಟುಂಬದವರಿಗೆ ನೆರವಾಗುವ ಸಲುವಾಗಿ, ವಿಮಾನ ನಿಲ್ದಾಣವಿದ್ದ ಜಿಯೊಲ್ಲನಮ್–ಡೊ ಪ್ರಾಂತ್ಯದಲ್ಲಿ ತಾತ್ಕಾಲಿಕವಾಗಿ ವಿಶೇಷ ರೈಲು ಕಾರ್ಯಾಚರಣೆ ಆರಂಭಿಸುವುದಾಗಿ ಕೊರಿಯಾ ರೈಲ್ವೆ ತಿಳಿಸಿದೆ. ಅಲ್ಲದೇ ಮುಯಾನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕ ಶವಾಗಾರವನ್ನು ಸ್ಥಾಪಿಸಲಾಗಿದ್ದು, ಅಲ್ಲಿ 94 ಶವಗಳನ್ನು ಇರಿಸಲಾಗಿದೆ. ಈ ಬಗ್ಗೆ ಯೋನ್ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.